ಗುಂಡ್ಲುಪೇಟೆ: ನಡು ರಸ್ತೆಯಲ್ಲಿ ಗೂಡ್ಸ್ ವಾಹನ ಹೊತ್ತಿ ಉರಿದ ಘಟನೆ ಕರ್ನಾಟಕ- ಕೇರಳ ಗಡಿಯಾದ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ನಡೆದಿದೆ.
ಕೇರಳದಿಂದ ಬರುತ್ತಿದ್ದ ಬೊಲೆರೊ ಪಿಕ್ ಅಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಹನದಿಂದ ಇಳಿದು ಚಾಲಕ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿ ನಡೆದಿದೆ.

