ಮೈಸೂರು: ಆಟವಾಡುತ್ತಿದ್ದ ಬಾಲಕನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕು ಶಬ್ಬೀರ್ ನಗರದಲ್ಲಿ ನಡೆದಿದೆ.
ಮಹಮದ್ ರಿಯಾನ್ (7) ಸಾವನ್ನಪ್ಪಿದ ಮಗು. ವೇಗವಾಗಿ ಬಂದ ಗೂಡ್ಸ್ ವಾಹನ ಬಾಲಕನ ಮೇಲೆ ಹರಿದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

