ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಕೆರೆಗೆ ಉರುಳಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಗೋಣತಗಾಲ ಗ್ರಾಮದ ಬಳಿ ನಡೆದಿದೆ. ಬಸ್ ನಲ್ಲಿದ್ದ ಸುಮಾರು 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರಗೂರು, ಹೆಡಿಯಾಲ ಮಾರ್ಗವಾಗಿ ಕುಣೇಗಾಲ ಗ್ರಾಮಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ಸು ಕೆರೆಗೆ ಉರುಳಿದೆ. ಚಾಲಕನ ಅಜಾಗರೂಕತೆ ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನ ಹೆಚ್ ಡಿ ಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಡಿಯಾಲ ಸಮೀಪದ ಬಡಗಲಪುರ ಯಶವಂತಪುರ ಎತ್ತಿಗೆ ಗ್ರಾಮಗಳ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಸರಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

