Bengaluru 22°C
Ad

ಸರ್ಕಾರದಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆಯಾಗಲಿ: ಲತಾ ಮುದ್ದುಮೋಹನ್

ರಾಜ್ಯ ಸರ್ಕಾರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷೆ ಲತಾ ಮುದ್ದುಮೋಹನ್ ಒತ್ತಾಯಿಸಿದ್ದಾರೆ.

ನಂಜನಗೂಡು: ರಾಜ್ಯ ಸರ್ಕಾರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷೆ ಲತಾ ಮುದ್ದುಮೋಹನ್ ಒತ್ತಾಯಿಸಿದ್ದಾರೆ.

ನಂಜನಗೂಡು ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಕಸಾಪ ಅಧ್ಯಕ್ಷೆ ಲತಾ ಮುದ್ದು ಮೋಹನ್ ಅವರು, ನಮ್ಮ ಕರ್ನಾಟಕದ ಹೆಸರನ್ನು ಬೆಳಗಿದ ಪುಣ್ಯ ಪುರುಷ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು. ಮೈಸೂರು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ನಡೆಸಿ, ಶಾಲಾ ಕಾಲೇಜುಗಳ ಸ್ಥಾಪನೆ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ನೀರಾವರಿ ಯೋಜನೆಗಳು, ವಿಶ್ವದಲ್ಲಿಯೇ ಪ್ರಥಮ ಬಾರಿಗೆ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ಸೇರಿದಂತೆ ಸಾರ್ವಜನಿಕರಿಗೆ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿ, ಇಡೀ ವಿಶ್ವವೇ ಮೆಚ್ಚುವ ಸಾಧನೆಗಳನ್ನು ಮಾಡಿ ತೋರಿಸಿದ್ದಾರೆ. ಇವರ ಸಾಧನೆಗಳನ್ನು ತಿಳಿಸುವ ಕೆಲಸವನ್ನು ಸರ್ಕಾರಗಳು ಮಾಡಬೇಕಿದೆ ಹಾಗಾಗಿ ಮುಂದಿನ ವರ್ಷದಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಬಳಿಕ ಖಜಾಂಚಿ ರಂಗಸ್ವಾಮಿ ಮಾತನಾಡಿ, ಅತ್ಯಂತ ಕಡಿಮೆ ಅವಧಿಯಲ್ಲಿ ಅವರು ಮಾಡಿದ ಅಭೂತಪೂರ್ವ ಕಾರ್ಯಗಳು ಪ್ರಸ್ತುತವಾಗಿವೆ. ಉಚಿತ ಶಿಕ್ಷಣ, ಜಲಾಶಯ ನಿರ್ಮಾಣ, ಜಲ ವಿದ್ಯುತ್, ಮಹಿಳೆಯರಿಗೆ ಮತದಾನದ ಹಕ್ಕು, ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಅವರ ಕೊಡುಗೆಗಳು ಅಪಾರವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಹಿಳಾ ಪ್ರತಿನಿಧಿ ಶೋಭ ನಾಗಶಯನ, ಸತೀಶ್, ರೇಖಾ, ಮಂಜುಳಾ ಸೇರಿದಂತೆ ಹಲವರು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad