Bengaluru 29°C
Ad

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜಿ.ಟಿ.ದೇವೇಗೌಡ ಆಗ್ರಹ

ಲೋಕಸಭಾ ಚುನಾವಣೆ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.

ಮೈಸೂರು: ಲೋಕಸಭಾ ಚುನಾವಣೆ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹೆಚ್ಚು ಸ್ಥಾನ ಗೆದ್ದಿದ್ದು, ಸಿದ್ದರಾಮಯ್ಯ ತವರು ಹಾಗೂ ಡಿ.ಕೆ.ಶಿವಕುಮಾರ್ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಸೋಲು ಕಂಡಿದೆ.

ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದ್ದರು, ಆದರೆ ಮತದಾರರು ಗ್ಯಾರಂಟಿ ವಿರುದ್ಧ ಮತ ನೀಡಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಮಾಡದ ಪರಿಣಾಮ ಅಭಿವೃದ್ಧಿ ಕುಂಠಿತಗೊಂಡಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರ ಅಕೌಂಟ್‌ಗೆ ಹಣ ಹಾಕುವ ಮೂಲಕ ಚುನಾವಣೆ ಗೆಲ್ಲಲು ಹೊರಟರು, ಜನ ಅದನೆಲ್ಲಾ ತಿರಸ್ಕಾರ ಮಾಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಜನರು ಒಪ್ಪಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಸ್ವಕ್ಷೇತ್ರದ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದರು.

Ad
Ad
Nk Channel Final 21 09 2023
Ad