ಮೈಸೂರು

ಎಚ್.ಡಿ.ಕೋಟೆ: ಗ್ರಾಮಕ್ಕೆ ನುಗ್ಗಿದ ಕಾಡಾನೆ ಮರಳಿ ಕಾಡಿಗೆ

ಎಚ್.ಡಿ.ಕೋಟೆ: ಮೇಟಿಕುಪ್ಪೆ ವನ್ಯಜೀವಿ ವಲಯಕ್ಕೆ ಸೇರಿದ ಕಾಡಾನೆಯೊಂದು ಕಾಡಂಚಿನ ಗ್ರಾಮ ಬೂದನೂರು ಗ್ರಾಮಕ್ಕೆ ಬೆಳ್ಳಂ ಬೆಳಿಗ್ಗೆಯೇ ಎಂಟ್ರಿ ಕೊಟ್ಟು ಗ್ರಾಮದ ಜನರಲ್ಲಿ ಆತಂಕ ಮೂಡಿಸಿತ್ತು. ಆದರೆ ಅರಣ್ಯಾಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಕಾಡಾನೆಯನ್ನು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ದಿಢೀರ್ ಗ್ರಾಮಕ್ಕೆ ನುಗ್ಗಿದ ಕಾಡಾನೆಯನ್ನು ಕಂಡ ಗ್ರಾಮಸ್ಥರು ಗಾಬರಿಗೊಂಡು ಕೂಗಾಡುತ್ತಾ ಓಡಿದರಾದರೂ ಆದರೆ ಯಾವುದೇ ಹಾನಿ ಮಾಡದೆ ಗ್ರಾಮದಲ್ಲಿ ಅಡ್ಡಾಡಿದ ಕಾಡಾನೆಯನ್ನು ಕೊನೆಗೂ ಕಾಡಿಗೆ ಅಟ್ಟಲಾಗಿದೆ.

ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮ ಕಾಡಂಚಿನ ಗ್ರಾಮವಾಗಿದ್ದು ಕೂಗಳತೆ ದೂರದಲ್ಲೇ ಮೇಟಿಕುಪ್ಪೆ ವನ್ಯಜೀವಿ ವಲಯಕ್ಕೆ ಸೇರಿದ ಬೃಹತ್ ಕಾಡಿದ್ದರೂ, ಇದುವರೆಗೆ ಗ್ರಾಮದ ಇತಿಹಾಸದಲ್ಲೇ ಎಂದೂ ಬೆಳಗ್ಗಿನ ಜಾವ ಕಾಡಾನೆ ಕಾಣಿಸಿಕೊಂಡಿರಲಿಲ್ಲ, ಆದರೆ ಸೆ.19ರಂದು ಬೆಳಿಗ್ಗೆಯೇ ಕಾಡಾನೆ ಗ್ರಾಮದೊಳಗೆ ಕಂಡು ಬಂದಿರುವು ಗ್ರಾಮಸ್ಥರು ಬೆಚ್ಚಿ ಬೀಳುವಂತೆ ಮಾಡಿತ್ತು.

ಕಾಡಾನೆಯನ್ನು ಕಂಡ ಗ್ರಾಮದ ಯುವಕರು ಅದನ್ನು ಹಿಂಬಾಲಿಸಿ ಬೆದರಿಸಿ ಓಡಿಸುವ ಪ್ರಯತ್ನ ಮಾಡಿದರು. ಜನರನ್ನು ಕಂಡು ಗಾಬರಿಗೊಂಡ ಕಾಡಾನೆ ಕೆಲ ಹೊತ್ತು ಗ್ರಾಮದ ಬೀದಿಗಳಲ್ಲೇ ಅಡ್ಡಾಡಿತು. ಈ ವೇಳೆ ಗ್ರಾಮದ ಮುಖಂಡ ಬೂದನೂರು ಮಹದೇವ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಆನೆಯನ್ನು ಕಾಡಿಗೆ ಅಟ್ಟುವ ಪ್ರಯತ್ನ ಮಾಡಿದರು.

ಅಷ್ಟರಲ್ಲಿಯೇ ಅರಣ್ಯಾಧಿಕಾರಿಗೆ ಮಾಹಿತಿ ನೀಡಿದ್ದರಿಂದ ಸಿಬ್ಬಂದಿಯೊಂದಿಗೆ ಗ್ರಾಮಕ್ಕೆ ಆಗಮಿಸಿದ ಮೇಟಿಕುಪ್ಪೆ ವನ್ಯಜೀವಿ ವಲಯದ ಆರ್‌ಎಫ್‌ಒ ನಾರಾಯಣನಾಯ್ಕ ಅವರು ಗ್ರಾಮದ ಜನರನ್ನು ಚದುರಿಸಿ ಒಂಟಿ ಸಲಗನಿಗೆ ಯಾವುದೇ ತೊಂದರೆಯಾಗದಂತೆ ಕಾಡಿಗೆ ಅಟ್ಟಿದ್ದಾರೆ.

ಈ ವೇಳೆ ಮಾತನಾಡಿದ ಆರ್‌ಎಫ್‌ಒ ನಾರಾಯಣನಾಯ್ಕರವರು ಕಾಡಾನೆಗಳು ಕಾಡಿನಿಂದ ಹೊರ ಬಾರದಂತೆ ದೊಡ್ಡ ಪ್ರಮಾಣದ ಟ್ರಂಚ್ ನಿರ್ಮಾಣ ಮಾಡಿ, ಹೆಚ್ಚಿನ ಸಿಬ್ಬಂದಿಯನ್ನು ಕಾವಲಿಗೆ ನಿಯೋಜಿಸಲಾಗಿದೆ, ಅದರೂ ಆಕಸ್ಮಿಕವಾಗಿ ಬೂದನೂರು ಗ್ರಾಮಕ್ಕೆ ಕಾಡಾನೆ ಬಂದಿದೆ. ಗ್ರಾಮದ ಜನರಲ್ಲಿ ಯಾವುದೇ ಭಯ ಬೇಡ ಇನ್ನು ಮುಂದೆ ಗಸ್ತು ಹೆಚ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮಕ್ಕೆ ಕಾಡಾನೆ ಬಂದಿದ್ದ ವಿಚಾರ ತಿಳಿದು ಆತಂಕಗೊಂಡಿದ್ದ ಗ್ರಾಮಸ್ಥರು ಕಾಡಾನೆಯನ್ನು ಮರಳಿ ಕಾಡಿಗೆ ಅಟ್ಟಿದ್ದರಿಂದ ಗ್ರಾಮದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Ashika S

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

8 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

32 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

51 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago