ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಪಟ್ಟಣದಲ್ಲಿ ವಿಜೃಂಭಣೆಯಿಂದ ಹನುಮ ಜಯಂತಿಯನ್ನು ಆಚರಣೆ ಮಾಡಲಾಯಿತು.
ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಶ್ರೀ ಸಿದ್ದಲಿಂಗಸ್ವಾಮಿಗಳು, ಇಮ್ಮಡಿ ಮುರುಗಿ ಸ್ವಾಮಿಗಳು , ಶ್ರೀ ಪಟ್ಟದ ನಾಗರಾಜ ಸ್ವಾಮಿಗಳು,
ಶ್ರೀ ಜ್ಞಾನಾನಂದ ಚೆನ್ನ ರಾಜ ಅರಸ್ ಸ್ವಾಮಿಗಳು, ಮಾಜಿ ಶಾಸಕ ಹರ್ಷವರ್ಧನ್ ಸೇರಿದಂತೆ ಹನುಮ ಮತ್ತು ಶ್ರೀ ರಾಮ್ ಮೆರವಣಿಗೆಯ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಪ್ರತಿ ವರ್ಷವು ಹನುಮ ಜಯಂತಿಯನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಹನುಮ ಜಯಂತಿಯು ಯುವಕರಿಗೆ ಭಾತೃತ್ವ ಮತ್ತು ಸ್ವಾತಂತ್ರದ ಸಂಕೇತವಾಗಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ ಸುಮಾರು 38 ಜಾನಪದ ಕಲಾತಂಡಗಳು ಭಾಗವಹಿಸಿದ್ದವು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದವು. ಸಾವಿರಾರು ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡಯದಂತೆ ಪೋಲಿಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

