Categories: ಹಾಸನ

ಅಕ್ರಮ ಸಂಬಂಧಕ್ಕೆ ಸಹಕರಿಸದ ವಿವಾಹಿತ ಮಹಿಳೆ ಕೊಲೆ: ಆರೋಪಿ ಬಂಧನ

ಹಾಸನ, ಮಾರ್ಚ್ 20 ; ಹಾಸನ ತಾಲೂಕಿನ ದೊಡ್ಡಪುರ ಗ್ರಾಮದಲ್ಲಿ ಮಾರ್ಚ್ 16ರಂದು ಹಾಡುಹಗಲೇ ವಿವಾಹಿತ ಮಹಿಳೆಯನ್ನ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿ ದೊಡ್ಡಪುರ ಗ್ರಾಮದ ಲತೇಶ್‌ (35) ಎಂಬಾತನನ್ನು ಹಾಸನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕೊಲೆ ಮಾಡಿದ ಆರೋಪಿ ದೊಡ್ಡಪುರ ಗ್ರಾಮದ ಲತೇಶ್‌ (35) ಎಂಬಾತನನ್ನು ಹಾಸನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧಕ್ಕೆ ಸಹಕರಿಸದಿದ್ದಕ್ಕೆ ಮಾರ್ಚ್‌ 16 ರಂದು ರೇವತಿ ಎಂಬ 35 ವರ್ಷದ ಮಹಿಳೆಯನ್ನು ವಿಕೃತ ಕಾಮಿ ಲತೇಶ ಕೊಚ್ಚಿ ಕೊಲೆ ಮಾಡಿದ್ದ. ಅವಿವಾಹಿತನಾದ ಲತೇಶ ಮಹಿಳೆಯನ್ನು ಮದುವೆಗೆ ಪೀಡಿಸುತ್ತಿದ್ದ.

ನಿರಾಕರಿಸಿದಾಗ ಹತ್ಯೆ ಮಾಡಿದ್ದಾನೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಗುರುಪ್ರಸಾದ್​​ ಜೊತೆ ರೇವತಿ ಮದುವೆಯಾಗಿದ್ದು, 12 ವರ್ಷದ ಗಂಡು ಮಗು ಮತ್ತು 8 ವರ್ಷದ ಹೆಣ್ಣುಮಗುವಿದೆ. ವಿವಾಹಿತ ಮಹಿಳೆ ಹಿಂದೆ ಬಿದ್ದಿದ್ದ ಲತೇಶ್ ಆಕೆಯನ್ನು ಹತ್ಯೆ ಮಾಡಿದ್ದಾನೆ.

ಜೈಲುಸೇರಿದ್ದ ಕಿರಾತಕ; ಹಾಸನ ತಾಲ್ಲೂಕಿನ ದೊಡ್ಡಪುರ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಂಟಿ ಮಹಿಳೆಯ ಬರ್ಬರ ಹತ್ಯೆ ನಡೆದಿತ್ತು. ಹತ್ಯೆಗೂ ಮುನ್ನ ಆರೋಪಿ ಲತೇಶ್ ರೇವತಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದ. ಪಾತಕಿಯ ಒತ್ತಾಯಕ್ಕೆ ಮಹಿಳೆ ಮಣಿಯದಿದ್ದಾಗ, ಆಕೆಯನ್ನು ಕೊಚ್ಚಿ ಕೊಂದಿದ್ದ.

ಹಂತಕ ದೊಡ್ಡಪುರ ಗ್ರಾಮದ ಲತೇಶ್ 10 ವರ್ಷದ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ. ಆದರೆ ಆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಖುಲಾಸೆಗೊಂಡು ಬಿಡುಗಡೆಯಾಗಿದ್ದ.

ಜೈಲೂಟ ತಿಂದರೂ ಬದಲಾಗದ ವಿಕೃತ ಕಾಮಿ ಲತೇಶ್ ಪರಿಚಿತ ಮಹಿಳೆಯ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿ, ಆಕೆ ಒಪ್ಪದಿದ್ದಾಗ ಹತ್ಯೆ ಮಾಡಿದ್ದಾನೆ. ಪೊಲೀಸ್ ಶ್ವಾನ ಗ್ರಾಮದೊಳಗೆ ಹೋಗಿದ್ದರಿಂದ ಲತೇಶ್ ಮೇಲೆ ಅನುಮಾನ ಬಂದು ಅವನನ್ನು ವಿಚಾರಣೆ ಮಾಡಲಾಗಿತ್ತು.

ಈ ವೇಳೆ ಸದರಿ ಕೊಲೆ ಕೇಸ್ ಬಯಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ದಾಳಿ ಮಾಡಿ‌ ಕೊಚ್ಚಿ ಕೊಂದಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು.

ಅನಾರೋಗ್ಯ ಪೀಡಿತ ಪತಿಯನ್ನು ನೋಡಿಕೊಂಡು ಮನೆಯ ಜವಾಬ್ದಾರಿ ಹೊತ್ತಿದ್ದ ರೇವತಿ ಏನೂ ತಪ್ಪು ಮಾಡದೇ ಲತೇಶ್ ಕಾಮ ದಾಹಕ್ಕೆ ಬಲಿಯಾಗಿ ಹೋಗಿದ್ದಾಳೆ.‌ ರೇವತಿಯಿಲ್ಲದೇ ಗಂಡ ಹಾಗೂ ಮಕ್ಕಳು ಅನಾಥರಾಗಿದ್ದಾರೆ.

ಲತೇಶ್ ಇನ್ನೂ ಅನೇಕ ಇಂತಹ ಪ್ರಕರಣಗಳಲ್ಲಿ ಭಾಗಿಯಾರಬಹುದೆಂಬ ಶಂಕೆಯಲ್ಲಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಇಂತಹ ಸೈಕೋ ಪಾತ್‌ಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜನರು ಒತ್ತಾಯಿಸಿದ್ದಾರೆ.

Gayathri SG

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

8 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

31 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

50 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago