News Karnataka Kannada
Sunday, May 05 2024
ಹಾಸನ

ಕಾರು- ಲಾರಿ ಮುಖಾಮುಖಿ ಡಿಕ್ಕಿ: ಯುವಕ, ಅಕ್ಕನ ಮಗಳು ಸಾವು

Road Accidents 10092021
Photo Credit :

ಹಾಸನ: ಗೌರಿ ಹಬ್ಬಕ್ಕೆ ಅಕ್ಕನ ಕರೆದೊಯ್ಯಲು ಬಂದ ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಅಕ್ಕ‌-ಭಾವ ಹಾಗೂ ಮಗುವನ್ನ ಜೊತೆಯಲ್ಲೇ ತವರಿಗೆ ಕರೆದೊಯ್ಯುವಾಗ ಈ ಭೀಕರ ಅಪಘಾತವಾಗಿದೆ.

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಶಂಕರ್(22) ಹಾಗೂ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಲಾಳನಪುರದ ಶಂಕರ್ ಹಾಗು ಅರಕಲಗೂಡಿನ ಮಗು ಮೃತಪಟ್ಟವರು. ಗೌರಿ ಗಣೇಶ ಹಬ್ಬಕ್ಕಾಗಿ ಅಕ್ಕನಿಗೆ ಬಾಗಿನ ಕೊಟ್ಟು ಹಬ್ಬಕ್ಕೆ ಕರೆದೊಯ್ಯುತ್ತಿದ್ದ ತಮ್ಮ ಹಬ್ಬಕ್ಕೆಂದು ರಜೆ ಮೇಲೆ ಊರಿಗೆ ಬಂದಿದ್ದ ಬಿ.ಎಸ್.ಎಫ್ ಯೋಧ. ಮಧು ಮತ್ತು ಪತ್ನಿ ಚೈತ್ರಾಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಅರಕಲಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು