ಬೇಲೂರು : ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.
ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.