News Karnataka Kannada
Sunday, May 05 2024
ಹಾಸನ

ಕೆಎಸ್ಸಾರ್ಟಿಸಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಮೃತ

Woman killed in accident, son Ashwin and husband critically injured
Photo Credit :

ಹಾಸನ ಜಿಲ್ಲೆಯ ಬೇಲೂರು ಸಮೀಪ ಮಂಗಳವಾರ ಕೆಎಸ್ಸಾರ್ಟಿಸಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಬೇಲೂರು ಪಟ್ಟಣದ ನಿವಾಸಿಗಳಾದ ಅಕ್ಮಲ್ (18), ಜಿಲಾನಿ (19), ತೋಹಿದ್ (18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ರಿಹಾನ್ (19) ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಗಳ ಆಧಾರದಲ್ಲಿ ಇವರೆಲ್ಲರೂ ಬೇಲೂರಿನ ಖಾಸಗಿ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಈ ದುರ್ದೈವಿಗಳು ಮಂಗಳವಾರ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು