ಹಾಸನ: ಚಾಲಕನ ನಿಯಂತ್ರಣ ತಪ್ಪಿ, ರಾಜ್ಯ ರಸ್ತೆ ಸಾರಿಗೆ ಬಸ್ ( KSRTC ) ಉರುಳಿ ಬಿದ್ದ ಪರಿಣಾಮ, ಅದರಲ್ಲಿ ಪ್ರಯಾಣಿಸುತ್ತಿದ್ದಂತ ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಲಕ್ಷ್ಮೀಪುರ ಕ್ರಾಸ್ ಬಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ ತೆರಳುತ್ತಿತ್ತು. ಈ ವೇಳೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿಯಲ್ಲಿ ಇಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಸ್ ಉರುಳಿ ಬಿದ್ದ ಪರಿಣಾಮ ಐವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಬೇಲೂರು ಹಾಗೂ ಹಾಸನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ನಲ್ಲಿ 12 ಪ್ರಯಾಣಿಕರಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.