News Karnataka Kannada
Wednesday, May 01 2024
ಹಾಸನ

ಪ್ರೀತಂ ಗೌಡ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹೆಚ್.ಡಿ ದೇವೇಗೌಡ

Deve Gowda 12082021
Photo Credit :

ನವದೆಹಲಿ: ಹಾಸನ ಶಾಸಕ ಪ್ರೀತಂ ಗೌಡ ಬಗ್ಗೆ ಯಾವುದೇ ಪ್ರಶ್ನೆಗಳನ್ನು ಕೇಳಬೇಡಿ. ನನ್ನನ್ನು ಅಷ್ಟು ಕೆಳ ಮಟ್ಟಕ್ಕೆ ಇಳಿಸಬೇಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಸಂಸತ್ ಕಲಾಪದ ವಿಚಾರಗಳ ಬಗ್ಗೆ ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ಸಂಬಂಧ ಪ್ರೀತಂಗೌಡ ವ್ಯಕ್ತಪಡಿಸಿದ ಅಸಮಾಧಾನ ಬಗ್ಗೆ ಪ್ರಶ್ನೆ ಮಾಡಲಾಯಿತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೀವು ಈ ಬಗ್ಗೆ ನನ್ನ ಮತ್ತೆ ಮತ್ತೆ ಪ್ರಶ್ನೆ ಮಾಡಬೇಡಿ, ಈ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಡಿಮಿಡಿಗೊಂಡರು.

ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮಾತನಾಡಿದ ಅವರು, ನಾನು ಆ ಬಗ್ಗೆ ಚರ್ಚೆ ಮಾಡಲ್ಲ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ. ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದರು.

ಸಿಎಂ ಬೊಮ್ಮಾಯಿ ಅವರು ನನ್ನ ಮನೆಗೆ ಬಂದಿದ್ದರು. ನನ್ನಿಂದ ಸರ್ಕಾರಕ್ಕೆ ಏನೂ ತೊಂದರೆ ಆಗಲ್ಲ ಎಂದಿದ್ದೇನೆ ಅಷ್ಟೇ. ನೆಲ-ಜಲ-ಭಾಷೆ ವಿಚಾರವಾಗಿ ಸಹಕಾರ ನೀಡುತ್ತೇವೆ. ಜೊತೆಗೆ ರಾಜ್ಯದ ಜನತೆ ಅಭಿವೃದ್ಧಿ ವಿಚಾರವಾಗಿ ನಮ್ಮ ಪಕ್ಷ ಎಲ್ಲ ಸಹಕಾರಕ್ಕೂ ಸಿದ್ಧವಿದೆ ಎಂದು ಹೇಳಿರುವುದಾಗಿ ಅವರು ಹೇಳಿದರು.,

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು