ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದಲ್ಲಿಕಾಡಾನೆ ದಾಳಿಗೆ ಕಾಫಿ ತೋಟದ ಇಬ್ಬರು ಕೆಲಸಗಾರರು ಬಲಿಯಾಗಿರುವ ಘಟನೆ ನಡೆದಿದೆ.
ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಯ್ಯ(60), ಚಿಕ್ಕಯ್ಯ (50) ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಅರಣ್ಯ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.