ಹಾಸನ

ಭೂಮಿ ಉಳಿಸಿಕೊಡಲು ಆಗ್ರಹಿಸಿ ಪ್ರತಿಭಟನೆ

ಹಾಸನ:  ಕೈಗಾರಿಕೆಗೆ ರೈತರ ಜಮೀನನ್ನು ವಶಪಡಿಸಿಕೊಂಡಿರುವುದಕ್ಕೆ ನಮ್ಮ ವಿರೋಧವಿದ್ದು, ನಮ್ಮ ಭೂಮಿಯನ್ನು  ನಮಗೆ ಉಳಿಸಿಕೊಡಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮೈಲನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಮೈಲನಹಳ್ಳಿ ಹಾಗೂ ಹುಣಸೆಘಟ್ಟ ಗ್ರಾಮಗಳಲ್ಲಿ 142 ಎಕರೆ ರೈತರ ಜಮೀನನ್ನು ಕರ್ನಾಟಕ ಕೈಗಾರಿಕ ಪ್ರಾದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಳ್ಳಲಾಗಿದೆ. ನಮ್ಮ ಸಂಪೂರ್ಣ ಜೀವನಾಧಾರ ಈ ಭೂಮಿ ಆಗಿರುವುದರಿಂದ ಗ್ರಾಮದ ರೈತರುಗಳಾದ ನಾವು ಯಾವುದೇ ಕಾರಣಕ್ಕೂ ಭೂಮಿಯನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದಿದ್ದೆವು. ಈಗಾಗಲೇ ಈ ಗ್ರಾಮದಲ್ಲಿ ಸುಮಾರು 70 ಎಕರೆ ಜಾಗವು ಎತ್ತಿನಹೊಳೆ, ಗ್ಯಾಸ್ ಪೈಪ್‌ಲೈನ್, ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಈ ಎಲ್ಲಾ ಯೋಜನೆಗಳಿಗೆ ನಮ್ಮ ಭೂಮಿಯನ್ನು ಬಿಟ್ಟುಕೊಟ್ಟಿದ್ದೇವೆ. ಉಳಿಕೆ ಅಲ್ಪ ಸ್ವಲ್ಪ ಜಮೀನಿದ್ದು, ಇದೇ ನಮ್ಮ ಜೀವನಕ್ಕೆ ದಾರಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ನಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಆಗ್ರಹಿಸಿದರು.

ಭೂಮಿಯನ್ನು ನಂಬಿ ಬದುಕುತ್ತಿರುವ ನಮಗೆ ಬೇರೆ ಯಾವುದೇ ಆಧಾರವಿಲ್ಲ. ಆದ್ದರಿಂದ ದಯಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿಕೊಡಿ. ಇದಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಪ್ರಾದೇಶಾಭಿವೃದ್ಧಿ ಮಂಡಳಿ ಮೈಸೂರು ಇವರಿಗೆ ನಾವುಗಳು ತಕರಾರು ಅರ್ಜಿಯನ್ನು ಸಲ್ಲಿಸಿದ್ದರೂ ಇದುವರೆಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ ಎಂದು ದೂರಿದರು.

ನಮ್ಮ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೂ ತಕರಾರು ಅರ್ಜಿ ಸಲ್ಲಿಸಿದ್ದು, ಅವರು ಸಹ ಯಾವುದೇ ಪ್ರತಿಕ್ರಿಯೆ ನೀಡಿರುವುದಿಲ್ಲ. ನೀವು ನೀಡಿರುವ ಯಾವುದೇ ನೋಟಿಸ್ ಆಗಲಿ ಸಭೆಯನ್ನಾಗಲಿ ನಾವುಗಳು ಪಡೆದುಕೊಂಡಿರುವುದಾಗಲಿ ಸಭೆಗೆ ಹಾಜರಾಗಲಿ ಆಗಿರುವುದಿಲ್ಲ.

ಆದರೂ ಸಹ ತಾವುಗಳೆ ನಮ್ಮ ರೈತರ ಜಮೀನುಗಳಿಗೆ 1 ಎಕರೆಗೆ 18 ರೂ ಲಕ್ಷಗಳನ್ನು ನಿಗದಿಪಡಿಸಿ ಅದನ್ನು ನಮಗೆ ನೋಟಿಸ್ ಮುಖಾಂತರ ನೀಡಲು ಮುಂದಾಗಿದ್ದೀರಿ. ಆದರೂ ಸಹ ನಮ್ಮ ರೈತರು ನಮ್ಮ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದೆಂದು ತೀರ್ಮಾನಿಸಿ ಯಾರು ಕೂಡ ನಿಮ್ಮ ನೋಟಿಸ್‌ನ್ನು ಪಡೆದಿರುವುದಿಲ್ಲ. ದಯಮಾಡಿ ನಮ್ಮ ಫಲವಾತ್ತದ ಭೂಮಿಯನ್ನು ಯಾವುದೇ ಕೈಗಾರಿಕಾ ಅಭಿವೃದ್ಧಿಗೆ ವಶಪಡಿಸಿಕೊಳ್ಳದೆ ರೈತರಿಗೆ ಉಳಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಮೈಲನಹಳ್ಳಿ ಗ್ರಾಂದ ಅಶೋಕ್, ಕುಮಾರಪ್ಪ, ಶಂಕರಪ್ಪ, ಎಂ.ಎಸ್. ಲೋಕೇಶ್, ಶರತ್, ಸುರೇಶ್,  ಬಸವರಾಜು, ಹೊನ್ನಪ್ಪ, ಧರ್ಮಪ್ರಕಾಶ್, ಜಗದೀಶ್ ಇತರರು ಉಪಸ್ಥಿತರಿದ್ದರು.

Sneha Gowda

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

2 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

9 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

16 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

28 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

33 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

47 mins ago