ಹಾಸನ

ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಂತಹ ವಿಚಾರ ಪಠ್ಯಗಳಲ್ಲಿ ಇರಬೇಕು:ಹೆಚ್.ಡಿ.ಕುಮಾರಸ್ವಾಮಿ

ಹಾಸನ : ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಂತಹ ವಿಚಾರಗಳು, ಪಠ್ಯಗಳು ಶಾಲೆಗಳಲ್ಲಿ ಇರಬೇಕು ಎಂದು ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವದ್ಗೀತೆಯನ್ನು ಕುಟುಂಬದಲ್ಲೇ ನಮ್ಮ ತಂದೆ-ತಾಯಿ, ಹಿರಿಯರು ಹೇಳಿಕೊಡುತ್ತಾರೆ. ಸರ್ಕಾರದ ಕೆಲಸ ಏನಿದ್ದರೂ ಉತ್ತಮ ಶಿಕ್ಷಣ ನೀಡಿ ಮಕ್ಕಳ ಬದುಕನ್ನು ಕಟ್ಟಿಕೊಡುವುದು. ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಂತಹ ವಿಚಾರಗಳು, ಪಠ್ಯಗಳು ಶಾಲೆಗಳಲ್ಲಿ ಇರಬೇಕು ಎಂದರು.

ರಾಜ್ಯದಲ್ಲಿ ಕೇವಲ ಮತಬ್ಯಾಂಕ್‌ಗಾಗಿ ಇಂತಹ ಸೂಕ್ಷ್ಮ ವಿಚಾರಗಳು ಮುನ್ನೆಲೆಗೆ ಬರುತ್ತಿವೆ. ನಮ್ಮ ಮಕ್ಕಳಿಗೆ ಬೇಕಿರುವುದು ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಶಿಕ್ಷಣ. ರಾಜ್ಯದಲ್ಲಿ ಸಮಸ್ಯೆಗಳು ಸಾಕಷ್ಟು ಇವೆ. ರೈತರ ಕಷ್ಟಗಳು ದೊಡ್ಡ ಪ್ರಮಾಣದಲ್ಲಿ ಇವೆ ಈ ಬಗ್ಗೆ ಸರ್ಕಾರ ಗಮನ ಹರಿಸಲಿ ಎಂದು ಹೇಳಿದರು.

Swathi MG

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

14 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

30 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago