ಹಾಸನ(ಫೆ.24) : ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಹಾಸನ ನಗರದ ಹೇಮಾವತಿ ನಗರದಲ್ಲಿ ಇಂದು(ಗುರುವಾರ) ನಡೆದಿದೆ. ಅಪ್ಪ, ಅಮ್ಮ, ಮಗ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಸತ್ಯಪ್ರಸಾದ್(54),ಅನ್ನಪೂರ್ಣ(50) ಹಾಗೂ ಗೌರವ್(21) ಮೃತ ದುರ್ದೈವಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಆತ್ಮಹತ್ಯೆಯ ಕಾರಣದ ಬಗ್ಗೆ ಪರಿಶೀಲನೆ ಪೊಲೀಸರು ನಡೆಸುತ್ತಿದ್ದಾರೆ. ಮೃತದೇಹಗಳನ್ನ ಹಾಸನ ನಗರದ ಹಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.