ಹಾಸನ : ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.
ಹಾಸನ ಜಿಲ್ಲೆಯಲ್ಲಿ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ 21 ಕಾನ್ಸ್ಟೇಬಲ್ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯ ಕೊರೊನಾ ಸೋಂಕಿತ ಪೊಲೀಸರನ್ನು ಹೋಂ ಕ್ವಾರೆಂಟೇನ್ ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಸಂಪರ್ಕದಲ್ಲಿದ್ದವರಿಗೂ ಕೋವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.