News Karnataka Kannada
Thursday, May 02 2024
ಹಾಸನ

ಹಾಸನ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು ಸಾವು

Accident
Photo Credit :

ಹಾಸನ: ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮಕ್ಕಳೊಂದಿಗೆ ಇದ್ದ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿವಾನಂದ್ ಮತ್ತು ಅವರ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವಳಿ ಮಕ್ಕಳಾದ ಮೂರು ವರ್ಷದ ಪ್ರಣವ್ ಮತ್ತು ಪ್ರಣತಿ ಮೃತಪಟ್ಟರೆಂದು ಹೇಳಲಾಗಿದೆ. ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಲಾರಿ ಚಕ್ರಕ್ಕೆ ಸಿಲುಕಿ ಮಕ್ಕಳ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಪರಾರಿಯಾಗಲೆತ್ನಿಸಿದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಹಾಸನ ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು