Categories: ಹಾಸನ

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

ಹಾಸನ: ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಮುಖಂಡ, ವಕೀಲ ಕವನ್ ಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವವರ ವಿರುದ್ಧ ಇನ್ಪಾರ್ಮೆಷನ್ ಆಕ್ಟ್ ೬೭ ಎ ನಲ್ಲಿ ಐದು ವರ್ಷಗಳ ಶಿಕ್ಷೆಯಾಗುವ ಸಾಧ್ಯತೆ ಇದೆ. ವಿಡಿಯೋ ಹಂಚುವವರು ಅದರಲ್ಲಿರುವ ಮಹಿಳೆಯರ ಗುರುತು ಮರೆ ಮಾಡಿಲ್ಲ. ಇದರಿಂದ ಅವರ ಗೌರವಕ್ಕೆ ಧಕ್ಕೆ ಬಂದಿದೆ. ಈ ಪ್ರಕರಣ ಸಂಬಂಧ ನವೀನ್ ಗೌಡ ಎಂಬಾತನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಆದರೂ ಆತನನ್ನು ವಶಕ್ಕೆ ಪಡೆದಿಲ್ಲ. ಆತನಿಗೆ ವಿಡಿಯೋ ಗಳು ಹೇಗೆ ಸಿಕ್ಕವು. ಆತನಿಗೆ ಆಶ್ರಯ ನೀಡಿದ್ದು ಯಾರು ಎಂಬುದರ ಬಗ್ಗೆ ಚರ್ಚೆ ಆಗಬೇಕು ಎಂದು ಆಗ್ರಹಿಸಿದರು. ರಾಮನಗರ ಶಾಸಕ ಇಕ್ಬಾಲ್ ಹುಸೆನ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೂಡ ಈಗ ಬಹಿರಂಗವಾಗಿದೆ. ಮಹಿಳಾ ಆಯೋಗದವರು ಈಗ ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಜೆಡಿಎಸ್ ಪಕ್ಷ ವಿಡಿಯೋ ಪ್ರಕರಣ ಸಂಬಂಧ ಈಗಾಗಲೇ ಕ್ರಮ ಜರುಗಿಸಿದೆ. ಕಾಂಗ್ರೆಸ್ ಕೂಡ ಕೂಡಲೇ ಶಾಸಕ ಇಕ್ಬಾಲ್ ಅವರನ್ನು ಅಮಾನತು ಮಾಡಬೇಕು. ನವೀನ್ ಅವರನ್ನುನ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ವಿಡಿಯೋಗಳನ್ನು ಹಂಚುವ ಮೂಲಕ ಯಾರೂ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು. ವಿಡಿಯೋ ಫಾರ್ವರ್ಡ್ ಮಾಡುವ ವಿಷಯದಲ್ಲಿ ಎಲ್ಲರೂ ಸ್ವಯಂ ನಿಯಂತ್ರ ಅಳವಡಿಸಿಕೊಂಡು ಮಹಿಳೆಯರ ಮಾನ ಹಾನಿಯಾಗುವುದನ್ನು ತಡೆಗಟ್ಟಬೇಕು ಎಂದರು.

Maithri S

Recent Posts

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

4 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

11 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

26 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

29 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

30 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

47 mins ago