Categories: ಹಾಸನ

ಆಲೂರು: 8 ಗ್ರಾಮಗಳಲ್ಲಿ ಕಾಲು ಸೇತುವೆಗಳ ನಿರ್ಮಾಣ

ಆಲೂರು: ಶಾಲಾ ಸೇತು ಬಂಧ ಯೋಜನೆ ಅಡಿಯಲ್ಲಿ ತಾಲೂಕಿನ 8 ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಲು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಚ್. ಕೆ ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗಟ ಗೆರೆ ಗ್ರಾಮದಲ್ಲಿನ ಕೆರೆಕೋಡಿಗೆ ಸುಮಾರು 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಲು ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಶಾಲೆಗೆ ಹೋಗಲು ಅನುಕೂಲವಾಗುವಂತೆ ಶಾಲಾ ಸೇತುಬಂಧ ಯೋಜನೆ ಅಡಿಯಲ್ಲಿ ಕಾಲು ಸೇತುಬಂಧ ಸೇತುವೆಗಳನ್ನು ನಿರ್ಮಿಸಲಾಗುತ್ತಿದ್ದು ಇದನ್ನು ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ ಅವರು ಕಳೆದ 3 ಅವಧಿಯಲ್ಲಿ ಆಲೂರು ಸಕಲೇಶಪುರ ಕಟ್ಟಾಯ ಕ್ಷೇತ್ರದ ಮತದಾರರು ಬೆಂಬಲಿಸಿ ಶಾಸಕನನ್ನಾಗಿ ಮಾಡಿ ಜನರ ಸೇವೆಗೆ ಸಹಕರಿಸಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಕ್ಷೇತ್ರದ ಜನತೆ ಕೈಹಿಡಿಯುವಂತೆ ಮನವಿ ಮಾಡಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್ ಮಂಜೇಗೌಡ ಮಾತನಾಡಿ ಕಳೆದ 20 ವರ್ಷಗಳಿಂದಲೂ ಈ ಭಾಗದ ಜನರು ಕಾಲು ಸೇತುವೆಗಾಗಿ ಬೇಡಿಕೆಯನ್ನು ಇಟ್ಟಿದ್ದರು. ಅದನ್ನು ಮನಗಂಡು ಶಾಸಕರು ಈ ಗ್ರಾಮಕ್ಕೆ ಕಾಲು ಸೇತುವೆಯನ್ನು ನಿರ್ಮಿಸುತ್ತಿರುವುದಾಗಿ ತಿಳಿಸಿದ ಅವರು ತಾಲೂಕಿನ ಅಭಿವೃದ್ಧಿಗೆ ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಅನೇಕ ಯೋಜನೆ ಹಾಗೂ ಅನುದಾನಗಳನ್ನು ನೀಡಿದೆ, ಅದೇ ರೀತಿ ಶಾಸಕ ಎಚ್ ಕೆ ಕುಮಾರಸ್ವಾಮಿ ಅವರು ತಮ್ಮ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಮುಂಬರುವ ದಿನಗಳಲ್ಲಿ ಶಾಸಕರನ್ನು ಇನ್ನೊಂದು ಅವಧಿಗೆ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಶಾಸಕ ಎಚ್ ಕೆ ಕುಮಾರಸ್ವಾಮಿ, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ ವಿ ಲಿಂಗರಾಜು, ಹಾಲು ಹಾಸನ ಒಕ್ಕೂಟ ನಿರ್ದೇಶಕ ಪಿ ಎಲ್ ನಿಂಗರಾಜು, ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಯಾಣ್ ಕುಮಾರ್, ಮಾಜಿ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಇದ್ದರು.

Gayathri SG

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

5 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

11 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

16 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

18 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

29 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

31 mins ago