Categories: ಹಾಸನ

ಆಲೂರು: ಅಕ್ರಮ ಕಲ್ಲು ಗಣಿಗಾರಿಕೆ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಆಲೂರು: ಅಧಿಕಾರಿಗಳು ಗ್ರಾಮದಲ್ಲಿ ಅಕ್ರಮವಾಗಿ ಕಲ್ಲು ಗಣಗಾರಿಕೆ ನಡೆಸಲು ಅನುಮತಿ ನೀಡಿರುವುದನ್ನು ರದ್ದು ಪಡಿಸಬೇಕು, ಗಣಿಗಾರಿಕೆ ನಿಲ್ಲಿಸದಿದ್ದರೆ ಚುನಾವ ಣೆಯನ್ನು ಬಹಿಷ್ಕಾರಿಸುವುದರ ಜೊತೆಗೆ ದಯಾ ಮರಣಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹಳೇ ಹೊಂಕರವಳ್ಳಿ ಗ್ರಾಮಸ್ಥರು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಗ್ರಾಮಸ್ಥ ಪ್ರಕಾಶ್ ಮಾತನಾಡಿ, ತಾಲ್ಲೂಕಿನ ಮಲ್ಲಾಪುರ ಗ್ರಾ ಪಂ ಗೆ ಸೇರಿರುವ ಹೊಂಕರವಳ್ಳಿ ಗಡಿ ಭಾಗದ ಸರ್ವೇ ನಂ ೫೭ ರ ಪಕ್ಕ, ಸಕಲೇಶಪುರ ತಾಲೂಕು ಬೆಳ ಗೋಡು ಹೋಬಳಿ ಹೊಸಗದ್ದೆ ಗ್ರಾಮದ ಸರ್ವೇ ನಂ ೧೪೯ ರಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಗಣಿಗಾರಿಕೆ ನಡೆಸಲು ಪ್ರಭಾವಿ ವ್ಯಕ್ತಿಗಳು ಹುನ್ನಾರ ನಡೆಸುತ್ತಿದ್ದು, ಅಲ್ಲಿ ವಾಸ ಮಾಡುತ್ತಿರುವ ಕುಟುಂಬ ಗಳನ್ನು ಒಕ್ಕಲೆಬ್ಬೆಸುವ ಕೆಲಸ ಮಾಡುತ್ತಿದ್ದಾರೆ, ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಗಳ ಸಹಾಯದಿಂದ ಗಣಿಗಾರಿಕೆ ನಡೆಸಲು ಮುಂದಾಗಿದ್ದಾರೆ, ಕಳೆದ ಆರೇಳು ತಿಂಗಳಿನಿಂದ ಈ ವಿಷಯವಾಗಿ ತಹಶೀಲ್ದಾರ್, ಲೋಕಾಯುಕ್ತ ಹಾಗೂ ಗಣಿಗಾರಿ ಕೆಯವರಿಗೆ ದೂರು ನೀಡಿದರು ಯಾವ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ಜಿಲ್ಲಾ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ದಾಖಲಾತಿ ಕೊಟ್ಟರು ಯಾವ ಅಧಿಕಾರಿಗಳು ಪರಿಗಣಿ ಸುತ್ತಿಲ್ಲ, ಮೂರು ತಿಂಗಳಿನಿಂದ ಹೋರಾಟ ಮಾಡುತ್ತಿದ್ದು ದಿನನಿತ್ಯ ಗ್ರಾಮಸ್ಥರು ಮನೆಯಿಂದ ಸಕಲೇಶಪುರ, ಆಲೂರು ತಾಲೂಕು ಕಚೇರಿಗೆ ಅಲೆದಾಡಿ ಸಾಕಾಗಿದೆ, ತಾಲ್ಲೂಕು ಮಟ್ಟದ ಅಧಿಕಾರಿ ಗಳಿಂದ ಹಿಡಿದು ಪಂಚಾಯಿತಿ ಅಧಿಕಾರಿಗಳೆಲ್ಲಾ ಶಾಮಿಲಾಗಿದ್ದು ಹಣದ ಆಸೆಗೆ ಕುಳಿತಲ್ಲೇ ಅಧಿಕಾರಿಗಳು ಹಾಗೂ ಗಣಿ ಇಲಾಖೆಯವರು ಸ್ಥಳ ಪರಿಶೀಲನೆ ಮಾಡದೆ ಅಕ್ರಮ ಕಲ್ಲು ಗಣಿಗಾರಿಕೆ ಮಾಡಲು ಅನುಮತಿ ಮಾಡಿಕೊ ಟ್ಟಿದ್ದಾರೆ, ಹಣದ ಆಮಿಷಕ್ಕೆ ಒಳಗಾಗಿರುವ ಅಧಿಕಾರಿಗಳು, ಬಡವರ ಜೀವನ ಹಾಗೂ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.

ಇನ್ನೂ ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು ಜೀವ, ಜೀವನ ನಡೆಸಲು ಕಷ್ಟಕರವಾಗಿದೆ, ಹಾಗೂ ಹಲವು ಪ್ರಾಣಿಗಳಿಂದ ಬೆಳೆದಿರುವ ಬೆಳೆಯು ಕೂಡ ಹಾನಿಯಾಗುತ್ತಿದ್ದು ತಿನ್ನುವ ಅನ್ನಕ್ಕೂ ನೆಮ್ಮದಿ ಇಲ್ಲ ದ್ದಂತಾಗಿದೆ. ಈಗ ಈ ಗಣಿಗಾರಿ ಕೆಯಿಂದ ಇನ್ನೂ ಹೆಚ್ಚಿನ ಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ ಹಾಗಾಗಿ ಇವೆಲ್ಲವನ್ನೂ ಅಧಿಕಾರಿಗಳು ಮನಗೊಂಡು ನಮಗೆ ಜೀವನ ನಡೆಸಲು ಸಹಕಾರ ಮಾಡಿ ಕೊಡಬೇಕು ಮತ್ತು ಅಕ್ರಮ ಗಣಿಗಾರಿಕೆ ಮಾಡುವವರಿಗೆ ಸಹಾಯ ಮಾಡದೆ ಜನ ಸಾಮಾನ್ಯರ ಹಿತದೃಷ್ಟಿಯನ್ನು ಅರಿಯಬೇಕು, ಗ್ರಾಮಸ್ಥರ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಡೆಗಣಿಸದೆ ನಮಗೆ ಸೂಕ್ತ ನ್ಯಾಯ ದೊರಕಿಸಿ ಕೊಡಬೇಕು ಹಾಗೂ ಅಕ್ರಮ ಗಣಿಗಾರಿಕೆ ಮಾಡುತ್ತಿರು ವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರಾದ ಯೊಗೇಶ್, ರಾಕೇಶ್, ಚಂದ್ರು ಕುಮಾರ್, ಪ್ರಕಾಶ್, ಅಣ್ಣಪ್ಪ ಗುರುಪ್ರಸಾದ್, ಯೋಗೇಶ್, ನಾಗೇಶ್ ಇದ್ದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago