Categories: ಹಾಸನ

ಆಲೂರು: ವೈದ್ಯರ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ, ಪೋಷಕರಿಂದ ರಸ್ತೆ ತಡೆದು ಪ್ರತಿಭಟನೆ

ಆಲೂರು:  ವೈದ್ಯ- ನರ್ಸ್‌ಗಳ ನಿರ್ಲಕ್ಷ್ಯದಿಂದಾಗಿ ಆಗತಾನೆ ಹುಟ್ಟಿದ ಮಗು ಕಣ್ಣು ಬಿಡುವುದಕ್ಕೂ ಮುನ್ನವೇ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ಪಾಳ್ಯ ಆರೋಗ್ಯ ಕೇಂದ್ರದ ಮೇಲೆ ಕೇಳಿ ಬಂದಿದೆ.

ವೈದ್ಯರು ಫಾತಿಮಾ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿ ಹೆರಿಗೆ ಸಾಧ್ಯವಾಗದಿದ್ದರೂ ಬಲವಂತವಾಗಿ ಮಾಡಿಸಿದ್ದರಿಂದ ಮಗು ಮೃತ ಪಟ್ಟಿದೆ ಎಂಬ ಬಗ್ಗೆ ದೂರು ಗರ್ಭಿಣಿ ಜ್ಯೋತಿ ಕುಟುಂಬಸ್ಥ ರಿಂದ ಕೇಳಿ ಬಂದಿದ್ದು ರಾಷ್ಟ್ರೀಯ ಹೆದ್ದಾರಿ ಹಾಗೂ ಆಸ್ಪತ್ರೆ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಸಿಂಗಟಕೆರೆ ಗ್ರಾಮದಿಂದ ಬುಧವಾರ ಸಂಜೆ ಹೊಟ್ಟೆ ನೋವು ಎಂದ ಗರ್ಭಿಣಿ ಜ್ಯೋತಿಯನ್ನು ಪಾಳ್ಯದ ಆರೋಗ್ಯ ಕೇಂದ್ರಕ್ಕೆ ಪತಿ ಸತೀಶ್ ಹಾಗೂ ಕುಟುಂಬಸ್ಥರು ಕರೆದುಕೊಂಡು ಬಂದಿದ್ದಾರೆ ಗರ್ಭಿಣಿಯ ಪರಿಸ್ಥಿತಿಯಬಗ್ಗೆ ವೈದ್ಯ ಡಾಕ್ಟರ್ ಫಾತಿಮಾ ಅವರನ್ನು ಕೇಳಿದಾಗ ಯಾವುದೇ ಸಮಸ್ಯೆ ಇಲ್ಲ ಗರ್ಭಿಣಿ ಹೊಟ್ಟೆಯಲ್ಲಿ ಮಗು ಆರೋಗ್ಯವಾಗಿದೆ ಇಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ನಾರ್ಮಲ್ ಹೆರಿಗೆ ಆಗುತ್ತದೆ ಎಂದು ತಿಳಿಸಿದ್ದಾರೆ ಆದರೆ ವೈದ್ಯ ಫಾತಿಮಾ ಹಾಗೆ ಹೇಳಿದ ಕೆಲವೇ ಸಮಯದಲ್ಲಿ ಮಗು ಮೃತಪಟ್ಟಿದೆ. ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸ್ವಲ್ಪ ಸಮಯ ಕಳೆದ ನಂತರ ಗರ್ಭಿಣಿ ಹೊಟ್ಟೆ ನೋವಿನಿಂದ ಒದ್ದಾಡಿದ್ದಾರೆ ಯಾವ ವೈದ್ಯರು ವಾರ್ಡಗೆ ಬಂದಿಲ್ಲ ಗರ್ಭಿಣಿ ಜ್ಯೋತಿ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಅನುಪಸ್ಥಿತಿಯಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಬಲವಂತವಾಗಿ ಹೆರಿಗೆ ಮಾಡಿಸಿದ್ದಾರೆ ಮಗು ಹುಟ್ಟಿದ ಕೇವಲ ೧೦ ನಿಮಿಷ ಮಾತ್ರ ಉಸಿರಾಟ ನಡೆಸಿದೆ ಬಲವಂತವಾಗಿ ಹೆರಿಗೆ ಮಾಡಿದ ಕಾರಣ ಮಗು ಸಾವನ್ನಪ್ಪಿದೆ ಪಾಳ್ಯ ಆರೋಗ್ಯ ವೈದ್ಯಾಧಿಕಾರಿ ಫಾತೀಮಾ ಹಾಗೂ ಸಿಬ್ಬಂದಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಮೃತ ಮಗುವಿನ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಪಾಳ್ಯ ಆರೋಗ್ಯ ಕೇಂದ್ರದಲ್ಲಿ ವೈದ್ಯೆ ಫಾತೀಮಾ ಹಲವು ವರ್ಷಗಳಿಂದ ಪಾಳ್ಯ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಹಣ ಮಾಡುವ ಉದ್ದೇಶದಿಂದ ಸಿಬ್ಬಂದಿಗಳ ಜೊತೆ ಸೇರಿ ನಾರ್ಮಲ್ ಹೆರಿಗೆ ಮಾಡಿಸುವುದಾಗಿ ಹೇಳಿ ಹಣ ಪಡೆದು ಬಲವಂತವಾಗಿ ಹೆರಿಗೆ ಮಾಡಿಸುವ ಮೂಲಕ ಬಾಣಂತಿಯರು ಒಂಬತ್ತು ಹೊತ್ತು ತಿರುಗಿ ಕಣ್ಣು ಬೀಡುವದಕ್ಕಿಂತ ಮುಂಚೆ ತಮ್ಮ ಮಕ್ಕಳನ್ನು ಕಳೆದುಕೊಳ್ಳುವಂತಾಗಿದೆ ಇವರು ರಾಜಕೀಯವಾಗಿ ಪ್ರಬಲವಾಗಿ ಬೆಳೆದಿದ್ದಾರೆ ಯಾವುದೇ ಮುಲಾಜಿಗೂ ಒಳಪಡದೇ ಅಮಾನತ್ತು ಮಾಡಬೇಕು ಎಂದು ಕುಟುಂಬಸ್ಥರು ಅಕ್ರೋಶ ವ್ಯಕ್ತಪಡಿಸಿದರು.

ಗರ್ಭಿಣಿ ಜ್ಯೋತಿ ಅಜ್ಜಿ ಕೆಂಚಮ್ಮ ಮಾತನಾಡಿ ವೈದ್ಯರ ನಿರ್ಲಕ್ಷದಿಂದ ಮಗು ಮರಣ ಹೊಂದಿದೆ ಸಮಯಕ್ಕೆ ಸರಿಯಾಗಿ ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿದ್ದರೆ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿ ಮನೆ ಸೇರುತ್ತಿದ್ದರು ನನ್ನ ಮೊಮ್ಮಗಳು ಗರ್ಭಿಣಿಯಾದ ಮೊದಲಿನಿಂದಲೂ ಇದೆ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸುತ್ತಿದ್ದು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಬೇಕಾಬಿಟ್ಟಿ ಹೆರಿಗೆ ಮಾಡಿಸಿದ್ದರಿಂದ ಮಗುವಿನ ತಲೆ ಹಾಗೂ ಮೈಮೇಲೆ ಗಾಯಗಳಾಗಿದ್ದು ಮಗು ತಾಯಿಯ ಹೊಟ್ಟೆಯಿಂದ ಆಚೆ ಬಂದ ಕೇವಲ ೧೦ ನಿಮಿಷ ಮಾತ್ರ ಜೀವಂತವಾಗಿದ್ದು ನಂತರ ಸಾವನ್ನಪ್ಪಿದೆ ಎಂದು ಆರೋಪಿಸಿದರು.

ಸತ್ಯ ಶಾಕ್ ಗೆ ಒಳಗಾಗಿರುವ ಬಾಣಂತಿ ಜ್ಯೋತಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಇನ್ನು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ವೈದ್ಯಾದಿಕಾರಿ ಡಾಕ್ಟರ್ ಶಿವಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ ತಪ್ಪಿತಸ್ಥ ವೈದ್ಯೆ ಹಾಗೂ ಹೆರಿಗೆ ಮಾಡಿಸಿದ ಸಿಬ್ಬಂದಿಗಳ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದ್ದಾರೆ.

Ashika S

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

31 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

45 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago