Categories: ಹಾಸನ

ಅರಸೀಕೆರೆ: ಹಣ್ಣುಹಂಪಲು ವಿತರಿಸುವ ಮೂಲಕ ಕೆಎಂಶಿ ಹುಟ್ಟು ಹಬ್ಬ ಆಚರಣೆ

ಅರಸೀಕೆರೆ: ಸರಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಸಾರ್ವಜನಿಕರಿಗೆ ಉಪಹಾರವನ್ನು ವಿತರಿಸುವ ಮೂಲಕ ಶಾಸಕ ಶಿವಲಿಂಗೇ ಗೌಡರ ೬೫ನೇ ಹುಟ್ಟುಹಬ್ಬವನ್ನ ಕೆಎಂಎಸ್ ಅಭಿಮಾನಿಗಳು ವಿಶೇ ಷವಾಗಿ ಆಚರಿಸುವುದರೊಂದಿಗೆ ಗಮನ ಸೆಳೆದರು.

ಗಿಜಿಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರುಗಳಾದ ಧರ್ಮ ಶೇಖರ್,ಧರ್ಮೇಶ್, ನಾಗರಾಜ್,ಪುರಸಭೆ ಮಾಜಿ ಸದಸ್ಯ ಸುಬ್ರಮಣ್ಯ ಬಾಬು,ಹಾಗೂ ಮುಖಂಡರಾದ ಗಿರೀಶ್, ಜಾಜುರು ಸಿದ್ದೇಶ್,ಕನ್ನಡ ಚಲನಚಿತ್ರ ರಂಗದ ಉದ್ಯೋನ್ಮುಖ ಕಲಾವಿದ ವಿಭವ್ ಇಟಗಿ,ಹಾಗೂ ರೈತ ಸಂಘದ ಜಿಲ್ಲಾ ಸಂಚಾಲಕ ಬೋರನಕಪ್ಪಲು ಶಿವಲಿಂಗಪ್ಪ, ಇವರ ನೇತೃತ್ವದಲ್ಲಿ ಆಗಮಿಸಿದ ಕೆಎಂಎಸ್ ಅಭಿಮಾನಿಗಳು ಜೆಸಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಿ ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಸುಬ್ರಮಣ್ಯ ಬಾಬು ಮಾತನಾಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿರುವ ನಮ್ಮ ನಾಯಕರದ ಶಿವಲಿಂಗೇಗೌಡರಿಗೆ ದೇವರು ಹೆಚ್ಚಿನ ಆರೋಗ್ಯ ಆಯಸ್ಸನ್ನು ನೀಡಲಿ ಅಲ್ಲದೆ ರಾಜಕೀಯವಾಗಿಯೂ ಉನ್ನತ ಸ್ಥಾನಮಾನಗಳನ್ನ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಕೆಎಂಎಸ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿಭವ್ ಮಾತನಾಡಿ ಸಂಜೆ ನಗರದ ಪಿಪಿ ವೃತದಲ್ಲಿ ವಿಶೇಷ ಕಾರ್ಯ ಕ್ರಮವನ್ನು ಹಮ್ಮಿಕೊಂಡಿದ್ದು ಆ ಕಾರ್ಯಕ್ರಮದಲ್ಲಿ ಶಾಸಕ ಶಿವಲಿಂಗೇಗೌಡರಿಗೆ ಅಭಿನಂ ದಿಸಲಾಗುವುದು ಈ ಸಂದರ್ಭದಲ್ಲಿ ಕೆಎಂಎಸ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

Sneha Gowda

Recent Posts

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

6 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

17 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

32 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

53 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago