Categories: ಹಾಸನ

ಅರಸೀಕೆರೆ: ಶಶಿಧರ್ ಮನೆಗೆ ಕುಮಾರಸ್ವಾಮಿ ಭೇಟಿ, ಮಾತುಕತೆ

ಹಾಸನ: ೨೦೨೩ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಕ್ಷೀಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು ಅರಸೀಕೆರೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಮುಖಂಡ ಶಶಿಧರ್ ಮನೆಗೆ ಭೇಟಿ ನೀಡುವುದು ಅಚ್ಚರಿಗೆ ಕಾರಣವಾಗಿದೆ.

ಅರಸೀಕೆರೆಯ ಕಾಂಗ್ರೆಸ್ ಮುಖಂಡ ಜೆ.ಪಿ ಶಶಿಧರ್ ಅವರು ಕಳೆದ ಅರಸೀಕೆರೆ ವಿಧಾನಸಭೆ ಚುನಾವಣೆಯಲ್ಲಿ ಪರಭವ ಗೊಂಡ ಅಭ್ಯರ್ಥಿ ಯಾಗಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಕೆ.ಎಂ ಶಿವಲಿಂಗೇಗೌಡ ವಿರುದ್ಧ ೫೦,೦೦೦ಕ್ಕೂ ಹೆಚ್ಚು ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು.

ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಮತಗಳಿರುವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕ ರಾಗಿರುವ ಶಶಿಧರವರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಈ ಭೇಟಿ ಅಚ್ಚರಿಯ ಬೆಳವಣಿಗೆಯಾಗಿದೆ . ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತಿರುವ ಬೆನ್ನಲ್ಲೇ ಶಶಿಧರ ಅವರ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ಮಾಡುತ್ತಿದ್ದು ಈಗಾಗಲೇ ಒಂದು ಸುತ್ತು ಕಾಂಗ್ರೆಸ್ ರಾಜ್ಯ ನಾಯಕರು ಸಹ ಭೇಟಿ ನೀಡಿ ಶಿವಲಿಂಗೇಗೌಡರ ಪರ ಪ್ರಚಾರ ಮಾಡಿದ್ದಾರೆ.

ಜೆಡಿಎಸ್ ಪಕ್ಷದಿಂದ ಬಾಣಾವರ ಅಶೋಕ್ ಅವರು ಕಣಕ್ಕಿಳಿಯಲಿದ್ದು ಶಶಿಧರ್ ಮನೆಗೆ ಬಾಣಾವರ ಅಶೋಕ್ ಸೇರಿದಂತೆ ಜೆಡಿಎಸ್ ನ ಪ್ರಮುಖ ಮುಖಂಡರು ಭೇಟಿ ವೇಳೆ ಕಾಣಿಸಿಕೊಂ ಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಾಣಾವರ ಅಶೋಕ ಅವರಿಗೆ ಬೆಂಬಲಿಸುವಂತೆ ಹಾಗೂ ಜೆಡಿಎಸ್ ಗೆಲುವಿಗೆ ಸಹಕಾರ ನೀಡುವಂತೆ ಶಶಿಧರ್ ಅವರಲ್ಲಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಬಾಣಾವರ ಅಶೋಕ್ ಅವರಿಗೆ ಬೆಂಬಲ ಹಾಗೂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಶಶಿಧರ್ ಅವರು ಕುಮಾರಸ್ವಾಮಿ ಅವರಲ್ಲಿ ಕೆಲ ದಿನಗಳ ಕಾಲಾವಕಾಶ ಕೇಳಿದ್ದು ನಂತರ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

Gayathri SG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago