Categories: ಹಾಸನ

ಬೇಲೂರು: ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಬೇಲೂರು: ಶಿಲ್ಪಕಲೆಗಳ ತವರು ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಥಮ ಶಿಲಾ ಶಾಸನ ನೀಡಿದ ಬೇಲೂರು ತಾಲ್ಲೂಕಿನಲ್ಲಿ ಮಾರ್ಚ್ 7 ಮತ್ತು8 ರಂದು  ನಡೆಯುವ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬೇಲೂರು ತಹಶೀಲ್ದಾರ್ ರಮೇಶ್ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಎಲ್.ರಾಜೇಗೌಡರ ನೇತೃತ್ವದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದರು.

ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ತಹಶೀಲ್ದಾರ್ ರಮೇಶ್, ಸಾಮಾನ್ಯವಾಗಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಲಾಂಛನ ಬಿಡುಗಡೆ ಮಾಡುವುದಿಲ್ಲ. ಆದರೆ ಬೇಲೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಜಕ್ಕೂ ಕೂಡ ಉತ್ತಮ ಕಾರ್ಯವನ್ನು ನಡೆಸುವ ಮೂಲಕ ಬೇಲೂರು ತಾಲ್ಲೂಕಿನ ವೈವಿಧ್ಯಮಯ ಮತ್ತು ವೈವಿಧ್ಯತೆಯನ್ನು ಎತ್ತಿ ಹಿಡಿಯುವ ಲಾಂಛನವನ್ನು ನಮ್ಮ ಕೈಯಲ್ಲಿ ಬಿಡುಗಡೆ  ಮಾಡಲು ಅನುವು ಮಾಡಿದ ಪರಿಷತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ವಿಶೇಷವಾಗಿ ಬೇಲೂರಿನ ಶಿಲ್ಪಕಲೆಗಳು, ಹಲ್ಮಿಡಿ ಶಾಸನ ಮತ್ತು ನೀರಾವರಿ, ಕೃಷಿ ಲಾಂಛನದಲ್ಲಿ ಬಂದಿರುವುದು ಖುಷಿ ತಂದಿದೆ. 9ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸುಂದರವಾಗಿ ಮತ್ತು ಅರ್ಥಪೂರ್ಣವಾಗಲಿ ಎಂದು ಹಾರೈಸಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಲ್.ರಾಜೇಗೌಡ ಮಾತನಾಡಿ ಇದೇ ಪ್ರಥಮ ಬಾರಿಗೆ ಬೇಲೂರು ತಾಲ್ಲೂಕಿನ ಪ್ರಾಕೃತಿಕ  ಸೌಂದರ್ಯ ಹಾಗೂ ಸ್ವರೂಪವನ್ನು ಒಳಗೊಂಡ ಲಾಂಛನವನ್ನು ಯುವ ಸಾಹಿತಿ ಎ.ಸಿ.ನಿರಂಜನ್ ವಿನ್ಯಾಸ ಮಾಡಿದ್ದಾರೆ. ಈಗಾಗಲೇ 9ನೇ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ ಮಾಡಲಾಗುತ್ತದೆ. ಮಾರ್ಚ್ 7 ಮತ್ತು 8 ರಂದು ನಡೆಯುವ ಸಮ್ಮೇಳನದಲ್ಲಿ ಮೊದಲ ದಿನ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರಿಗೆ ಅಭಿನಂದನೆ ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಮಾ.8 ರಂದು ಬೆಳಿಗ್ಗೆ ಧ್ವಜಾರೋಹಣ, ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನೆ ಕಾರ್ಯಕ್ರಮ, ಕವಿಗೋಷ್ಠಿ ಮತ್ತು ವಿಚಾರ ಮಂಟಪ ಹಾಗೂ ಸಮಾರೋಪ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಮತ್ತು ಇಂದು ಬಿಡುಗಡೆಯಾದ ಸಮ್ಮೇಳನದ ಲಾಂಛನವನ್ನು ಸರ್ವರಿಗೂ ತಮ್ಮ ಮೊಬೈಲ್ ಡಿಪಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಬೇಕು ಎಂದು ವಿನಂತಿ ಮಾಡಿದರು.

ಕಾರ್ಯಕ್ರಮದಲ್ಲಿ ಕಸಾಪ ಮಾಜಿ ಅಧ್ಯಕ್ಷ ಮ.ಶಿವಮೂರ್ತಿ, ಗೌರವ ಕಾರ್ಯದರ್ಶಿ ಬಿ.ಬಿ.ಶಿವರಾಜ್, ಉಪಾಧ್ಯಕ್ಷ ಗುರುರಾಜ್, ಮಾಜಿ ಗೌರವ  ಕಾರ್ಯದರ್ಶಿ ಹೆಬ್ಬಾಳು ಹಾಲಪ್ಪ, ಸಂಘಟನಾ ಕಾರ್ಯದರ್ಶಿ ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಸಾಹಿತಿಗಳಾದ ಡಾ.ಶ್ರೀವತ್ಸ ಎಸ್ ವಟಿ, ಬೇಲೂರು ಪಲ್ಲವಿ, ಮಾರುತಿ ದೊಡ್ಡಕೊಡಿಹಳ್ಳಿ, ಪತ್ರಕರ್ತರಾದ ಲೋಹಿತ್, ಗಣೇಶ್, ರವಿ ಹೊಳ್ಳ, ರಮೇಶ್,  ಪರಿಷತ್ತು ಪದಾಧಿಕಾರಿಗಳಾದ ಬಿ.ಸಿ.ಆನಂದ್, ಚನ್ನಕೇಶವೇಗೌಡ, ಪುರುಷೋತ್ತಮ, ನಾಗರಾಜ್ ಇನ್ನೂ ಮುಂತಾದವರು ಹಾಜರಿದ್ದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago