ಹಾಸನ

ಬೇಲೂರು: ರಾತ್ರಿ ವೇಳೆ ಕುದುರೆ ಸವಾರಿ – ಯುವಕರಿಬ್ಬರಿಗೆ ಚೂರಿ ಇರಿತ

ಬೇಲೂರು: ಅಪರಿಚಿತರ ತಂಡವೊಂದು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಬಿಜಿಎಸ್ ಕಾಲೇಜು ಬಳಿ ಘಟನೆ ಗುರುವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಬೇಲೂರಿನ ನಿವಾಸಿಗಳಾದ ಅಫ್ತಾಬ್ (೧೯), ಫೈಝ್ (೨೪) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಇವರಿಬ್ಬರು ಹಾಸನದಿಂದ ಬೇಲೂರಿಗೆ ಕುದುರೆ ಸವಾರಿ ಮೂಲಕ ಹೋಗುತ್ತಿದ್ದಾಗ ಬಿಜಿಎಸ್ ಕಾಲೇಜು ಬಳಿ ಆರು ಜನರಿದ್ದ ಅಪರಿಚಿತರ ತಂಡವು ದಾಳಿ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.

ಈ ವಿಷಯ ತಿಳಿದು ಪೋಷಕರು ಘಟನಾ ಸ್ಥಳಕ್ಕೆ ಬಂದು ಯುವಕರನ್ನು ಬೇಲೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಈ ಪೈಕಿ ಅಫ್ತಾಬ್ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸುದ್ದಿ ತಿಳಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎ.ಎಸ್ಪಿ ತಮ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸದ್ಯ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಈ ಸಂಬಂಧ ಬೇಲೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರಿಂದ ನಿತ್ಯ ಪುಂಡಾಟ ಇನ್ನು ಚೂರಿ ಇರಿತಕ್ಕೆ ಒಳಗಾಗಿರುವ ಯುವಕರು ನಿತ್ಯ ರಾತ್ರಿ ವೇಳೆ ಗುಂಪುಗಳೊಂದಿಗೆ ಬೇಲೂರಿನಿಂದ ಹಾಸನಕ್ಕೆ ಹಾಗೂ ಹಾಸನದಿಂದ ಬೇಲೂರಿಗೆ ಐದಾರು ಬೈಕ್‌ಗಳಲ್ಲಿ ತಂಡವಾಗಿ ಆಗಮಿಸಿ ಪುಂಡಾಟ ನಡೆಸುತ್ತಿದ್ದರು ಎನ್ನಲಾಗಿದ್ದು ಈ ವೇಳೆಯ ಕಿರಿಕ್ ಗಳೇ ಚೂರಿ ಇರಿತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Ashika S

Recent Posts

ಅಮೇರಿಕಾ ಪ್ರಜೆ ಸ್ಯಾಮ್ ತುಳು ಭಾಷ ಪ್ರೇಮಕ್ಕೆ ತುಳುವರೇ ಫಿದಾ

ಅಮೇರಿಕಾದ ಪ್ರಜೆಯೊಬ್ಬರು ತುಳು ಭಾಷೆಗೆ ಫಿದಾ ಆಗಿ ತುಳುವರ ಸಂಸ್ಕೃತಿ ಆರಾಧನೆ ಕಲಿಯಲೆಂದೇ ಅಮೇರಿಕಾದಿಂದ ಮಂಗಳೂರಿಗೆ ಹಾರಿ ಬಂದಿದ್ದಾರೆ.

4 mins ago

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿತ್ತು ಸಂದೇಶ

ಶಾಲೆಗಳ ಬಾಂಬ್‌ ಬೆದರಿಕೆ ಬೆನ್ನಲ್ಲೆ ಇದೀಗ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್​ನಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ…

36 mins ago

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

1 hour ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

1 hour ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

2 hours ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

2 hours ago