News Karnataka Kannada
Tuesday, April 16 2024
Cricket
ಹಾಸನ

ನಕಲಿ ಪಿಸ್ತೂಲ್ ಹಿಡಿದು ಬೈಕ್ ರೈಡ್: ಇಬ್ಬರು ವಶಕ್ಕೆ

Accused
Photo Credit : News Kannada

ಹಾಸನ: ನಗರದಲ್ಲಿ ಪಿಸ್ತುಲ್ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ನಲ್ಲೊ ಅಡ್ಡಾದಿಡ್ಡಿ ಓಡಾಡಿದ ಪ್ರಕರಣದ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿಗೆ ನಕಲಿ ಪಿಸ್ತುಲ್ ಹಿಡಿದು ಬುಲೆಟ್ ನಲ್ಲಿ ಓಡಾಡಿದ್ದ ಇಬ್ಬರು ಯುವಕರು ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಸಂಚಾರ ಮಾಡಿದ್ದರು. ಅಲ್ಲದೆ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

ಕೈನಲ್ಲಿ ಪಿಸ್ತೂಲು ಹಿಡಿದು ಬೈಕ್ ರೈಡ್ ಮಾಡಿದ್ದ ಯುವಕರು ಹೆಲ್ಮೆಟ್ ಧರಿಸದೆ ಸಂಚಾರ ಮಾಡಿರುವ ಈ ವಿಡಿಯೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹಾಗೂ ವಿಡಿಯೋ ವೈರಲ್ ಆಗುತ್ತಲೆ ಯುವಕರನ್ನು ವಶಕ್ಕೆ ಪಡೆದ ಪೊಲೀಸರು ಯುವಕರ ಕೈನಲ್ಲಿದ್ದ ನಕಲಿ ಪಿಸ್ತೂಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ತೋರಿದ ಆರೋಪದಡಿ ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದು ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು