News Karnataka Kannada
Saturday, May 04 2024
ಹಾಸನ

ತ್ರಿಪುರ ಮತ್ತು ನಾಗಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ಜಯಭೇರಿ: ಹಾಸನದಲ್ಲಿ ವಿಜಯೋತ್ಸವ

BJP's victory in Tripura and Nagaland: Bjp's victory in Hassan
Photo Credit : News Kannada

ಹಾಸನ: ತ್ರಿಪುರ ಮತ್ತು ನಾಗಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಸರಕಾರ ರಚನೆಗೆ ಸಿದ್ಧತೆಯಲ್ಲಿರುವ ಹಿನ್ನಲೆಯಲ್ಲಿ ಹಾಸನ ನಗರದ ಎಂ.ಜಿ. ರಸ್ತೆಯ ಗಾಂಧೀಜಿ ಪ್ರತಿಮೆ ಮುಂಬಾಗ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರ ಹಾಕುವುದರ ಮೂಲಕ ಸಂಭ್ರಮಿಸಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಮಾತನಾಡಿ, ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವವಾದ ಜಯವನ್ನು ಗಳಿಸಿದೆ. ತ್ರಿಪುರ, ನಾಗಲ್ಯಾಂಡ್ ಭಾಗಗಳಲ್ಲಿ ಬಹುಮತ ನೀಡಿದ್ದು, ಈಗ ಬಿಜೆಪಿ ಸರಕಾರವನ್ನು ರಚನೆ ಮಾಡಲು ಅವಕಾಶ ದೊರಕಿದೆ. ಈ ಸಂಭ್ರದ ಕ್ಷಣಗಳನ್ನು ಹಂಚಿಕೊಳ್ಳಲು ಬಿಜೆಪಿ ಪಕ್ಷದ ಹಾಸನ ನಗರ ಮತ್ತು ಗ್ರಾಮಾಂತರ ಮಂಡಲದ ಕಾರ್ಯಕರ್ತರು ಎಂ.ಜಿ. ರಸ್ತೆ ಗಾಂಧೀಜಿ ಪ್ರತಿಮೆ ಬಳಿ ವಿಜಯೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದೇವೆ ಎಂದರು. ಈ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ಮುಂಬರುವಂತಹ ವಿಧಾನಸಭೆ ಚುನಾವಣೆಯ ದಿಕ್ಸೂಜಿ ಎಂದು ತಪ್ಪಾಗಲಾರದು. ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ಸಹಾ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡರು ಮತ್ತೆ ಗೆಲುವನ್ನು ಪಡೆಯುವ ವಿಶ್ವಾಸ ನಮಗೆಲ್ಲಾ ಇದೆ ಎಂದು ಹೇಳಿದರು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ರಂಗನಾಥ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ರತ್ನ ಪ್ರಕಾಶ್, ಪ್ರೀತಿವರ್ಧನ್, ರಾಹುಲ್ ಕಿಣಿ, ಮುರುಳಿ, ದರ್ಶನ್, ಗೋಪಿ, ರಾಜೇಶ್ ಸತ್ಯಮಂಗಲ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು