News Karnataka Kannada
Saturday, May 04 2024
ಹಾಸನ

ಬೈಕ್​, ಬಸ್ ನಡುವೆ ಭೀಕರ ಅಪಘಾತ : ಹೊತ್ತಿ ಉರಿದ ಬಸ್‌ : ಸವಾರ ಸಾವು

 ಬೈಕ್ ಹಾಗೂ ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ
Photo Credit : NewsKarnataka

ಹಾಸನ: ಬೈಕ್ ಹಾಗೂ ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಪಘಾತದ ಬಳಿಕ ಕೆ‌ಎಸ್‌ಆರ್‌ಟಿಸಿ ಬಸ್​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಕೆ‌ಎಸ್‌ಆರ್‌ಟಿಸಿ ಬಸ್ ಸುಟ್ಟು ಕರಕಲಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು