ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
ಬರ್ತ್ ಡೇ ಪಾರ್ಟಿ ಮಾಡಿ ಕಾರಿನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ.
ಮೃತರನ್ನು ಚನ್ನರಾಯಪಟ್ಟಣದ ರಕ್ಷಿತ್ (22) ಮತ್ತು ಕುಶಾಲ್ (24) ಎಂದು ಗುರುತಿಸಲಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.