Categories: ಹಾಸನ

ಚನ್ನರಾಯಪಟ್ಟಣ: ಎಪಿಎಂಸಿ ಆವರಣದ ಮರಗಳ ತೆರವುಗೊಳಿಸದಂತೆ ಆಗ್ರಹ

ಚನ್ನರಾಯಪಟ್ಟಣ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮರಗಳನ್ನು ತೆರವು ಮಾಡಬಾರದೆಂದು ಆಗ್ರಹಿಸಿ ತಾಲೂಕು ರೈತ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಪರಿಸರ ಪ್ರೇಮಿ ಅಶೋಕ್ ಆಗ್ರಹಿಸಿದರು.

ಪಟ್ಟಣದ ಆವರಣದಲ್ಲಿ ಮಾತನಾಡಿ ಕಳೆದ ೧೫ ವರ್ಷಗಳ ಹಿಂದೆ ಎಪಿಎಂಸಿ ಆವರಣದಲ್ಲಿ ಸುಮಾರು ೧,೦೦೦ ವಿವಿಧ ಜಾತಿಯ ಗಿಡಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆಯ ಅನುಮತಿ ಪಡೆದು ನೆಟ್ಟಿದ್ದವು. ಆದರೆ ಕೆಲವು ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ ೭೦೦ ಬಿಟ್ಟು, ಉಳಿದ ೩೦೦ ಮರಗಳನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಫಲ ಘಟಕವನ್ನು ನಿರ್ಮಾಣ ಮಾಡಲು ಟೆಂಡರ್ ನೀಡಿದ್ದಾರೆ ಆ ಸ್ಥಳದಲ್ಲಿ ಜಾನುವಾರುಗಳ ಮಾರುಕಟ್ಟೆ ಮರಗಳನ್ನು ತೆರವು ಇದ್ದು,ಅದರಲ್ಲಿ ೩೦೦ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ತೆರವಿಗೆ ಪತ್ರವನ್ನು ಬರೆದಿದ್ದಾರೆ.

ಈ ಮೂರು ಎಕರೆ ಭಾಗದಲ್ಲಿ ಮರಗಳನ್ನು ತೆರವು ಮಾಡಬಾರದು. ಹಾಗೇನಾದರೂ ತೆರವು ಮಾಡಿದರೆ ಇದರಿಂದ ಜಾನುವಾರುಗಳಿಗೆ ಮತ್ತು ರೈತರಿಗೆ ಆದ್ದರಿಂದ ಕೃಷಿ ಪತ್ತಿನ ಮಾರುಕಟ್ಟೆಯ ಸಮಿತಿಯವರು ಮತ್ತು ಸ್ಥಳೀಯ ಶಾಸಕರು ಇತ್ತ ಗಮನಹರಿಸಿ. ಉಗ್ರಾಣ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಗಿ ಮನವಿ ಮಾಡಿದರು, ಇದೆ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಸಿ ಜಿ ರವಿ ಮಾತನಾಡಿ ಹಾಸನ ಜಿಲ್ಲೆಯಲ್ಲಿಯೇ ಪಟ್ಟಣದ ಮಧ್ಯಭಾಗದಲ್ಲಿರುವಂತಹ ಎಪಿಎಂಸಿ ಮಾರುಕಟ್ಟೆ ಹಾಸನ ಜಿಲ್ಲೆಯ ಯಾವ ತಾಲೂಕಿನಲ್ಲೂ ಇರುವುದಿಲ್ಲ, ಇಂತಹ ಅನುಕೂಲಕರವಾದ ಮಾರುಕಟ್ಟೆಯ ಆವರಣದಲ್ಲಿ ಮರಣ ಮರಗಳ ಮರಣ ಹೋಮ ಮಾಡುತ್ತಿರುವುದು ರೈತರಿಗೆ ಹಾಗೂ ದನ ಕರುಗಳಿಗೆ ಬಹಳಷ್ಟು ತೊಂದರೆ ಉಂಟಾಗುತ್ತಿದೆ.

ಈ ಸ್ಥಳವನ್ನು ನೀಡಿದಂತಹ ರೈತರ ಮಕ್ಕಳುಗಳು ಇಂದು ಅನ್ನ ಇಲ್ಲದೆ ಬೀದಿ ಬೀದಿಯನ್ನು ಸುತ್ತುವ ಪರಿಸ್ಥಿತಿ ಬಂದು ಒದಗಿದೆ, ಆದರೆ ಕೃಷಿ ಉತ್ಪನ್ನ ಮಾರುಕಟ್ಟೆಯವರು ಪ್ರತಿ ಕುಂಟೆಗೆ ಖರೀದಿಸಿ. ಇಂದು ವ್ಯಾಪಾರಸ್ಥರಿಗೆ ಖಾಸಗಿ ವ್ಯಕ್ತಿಗಳಿಗೆ ಈ ಸ್ಥಳವನ್ನು ನೀಡಿ ಆದಾಯ ಮಾಡಿಕೊಳ್ಳಲು ಮುಂದಾಗಿದ್ದಾರೆ ಆದ್ದರಿಂದ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹೋದಲ್ಲಿ ರೈತ ಸಂಘದಿಂದ ಮತ್ತು ವಿವಿಧ ಪರ ಸಂಘಟನೆಗಳಿಂದ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಮೀಸೆ ಮಂಜಣ್ಣ, ಹಸಿರು ಸೇನೆ ಮತ್ತು ರಾಜ್ಯ ರೈತ ತಾಲೂಕು ಅಧ್ಯಕ್ಷ ಶಿವಣ್ಣ, ರೈತ ಮುಖಂಡರಾದ ಟೈಲರ್ ಕುಮಾರ್, ಅಪ್ಪಾಜಿ ಗೌಡ, ಮಂಜಣ್ಣ, ಶೆಟ್ಟಿಹಳ್ಳಿ ಶ್ರೀನಿವಾಸ್, ಚಿಕ್ಕ ಮತಿಗಟ್ಟ ಸ್ವಾಮಿ, ಸೇರಿದಂತೆ ಇತರರು ಹಾಜರಿದ್ದರು.

Ashika S

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

17 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

38 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

44 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago