Categories: ಹಾಸನ

ಚನ್ನರಾಯಪಟ್ಟಣ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಸಿ.ಎನ್. ಬಾಲಕೃಷ್ಣ

ಚನ್ನರಾಯಪಟ್ಟಣ: ಗುಲಸಿಂದ ಗ್ರಾಮದ ಪರಿಮಿತಿ ಯಲ್ಲಿ ಜನಸಂದಣಿ ಹಾಗೂ ವಾಹನ ದಟ್ಟನೆ ಹೆಚ್ಚಾಗಿರುವುದ ರಿಂದ ಅಪಘಾತಗಳನ್ನು ತಡೆ ಯುವ ನಿಟ್ಟಿನಲ್ಲಿ ರಸ್ತೆ ಅಗಲೀ ಕರಣಕ್ಕೆ ಕ್ರಮ ಕೈಗೊಂಡಿರು ವುದಾಗಿ ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ತಾಲೂಕಿನ ಮಾಳೆ ಕೊಪ್ಪಲು ರಾಷ್ಟ್ರೀಯ ಹೆದ್ದಾರಿ೭೫ರ ಬೈಪಾಸ್ ರಸ್ತೆಯ ಬಳಿ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರದ ಮೂರು ಕೋಟಿ ರೂ ಅನುದಾನದಲ್ಲಿ ೯ ಮೀಟರ್ ರಸ್ತೆ ಅಗಲೀಕರಣದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದರು.

ಅವರು ಮಾತನಾಡಿ ಗುಲಸಿಂದ ಗ್ರಾಮದ ಪರಿಮಿತಿ ಯಿಂದ ಬೈಪಾಸ್ ರಸ್ತೆಯವರೆಗೆ ೯ ಮೀಟರ್ ರಸ್ತೆ ಅಗಲೀಕರಣ ಗುಲಸಿಂದ ಗ್ರಾಮವು ಗ್ರಾ.ಪಂ. ಕೇಂದ್ರ ಸ್ಥಾನವಾದರಿಂದ ಗ್ರಾಮದ ಪರಿಮಿತಿಯಲ್ಲಿ ಎರಡು ಕಡೆ ಕೂಡ ಪ್ರಮಾಣದ ರಸ್ತೆ ಅಗಲೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಬಾಗೂರು ರಸ್ತೆ ಯಿಂದ ಮರುವನಹಳ್ಳಿ ಗ್ರಾಮದ ವರೆಗೆ ಮರು ಡಾಂಬರೀಕರಣ ಕುರುವಂಕ ಮತ್ತು ಕೆಲವು ಗ್ರಾಮಗಳ ಗ್ರಾಮದ ಪರಿಮಿತಿ ಯಲ್ಲಿ ಎರಡು ಬದಿ ಚರಂಡಿ ನಿರ್ಮಾಣ ಮಾಡಲಾಗುವು ದೆಂದು ತಿಳಿಸಿದರು.

ಪಾದಚಾರಿಗಳು ಹಾಗೂ ದ್ವಿಚಕ್ರ ಸವಾರರ ಅನುಕೂಲಕ್ಕಾಗಿ ರಸ್ತೆ ಅಗಲೀಕರಣ ಮಾಡುತ್ತಿದ್ದು ಗ್ರಾಮಗಳ ಪರಿಮಿತಿಯಲ್ಲಿ ವೈಜ್ಞಾನಿಕವಾಗಿ ಹಂಪ್ಸ್ ಗಳನ್ನು ನಿರ್ಮಿಸಲಾಗುವುದು.ರಸ್ತೆ ಕಾಮ ಗಾರಿಯಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವಂತೆ ಸೂಚಿಸಿದರು. ಹಾಗೂ ಎರಡನೇ ಹಂತದಲ್ಲಿ ಡಿವೈಡರ್ ಮತ್ತು ಹೆಚ್ಚುವರಿ ಯಾಗಿ ಎರಡು ಮೀಟರ್ ರಸ್ತೆ ಅಗಲೀಕರಣ ಮಾಡಲು ಗಮನಹರಿಸುವುದಾಗಿ ತಿಳಿಸಿದರು.

ಈ ಭಾಗ ಶೀತ ಪ್ರದೇಶವಾಗಿ ರುವುದರಿಂದ ಹಂತಹಂತವಾಗಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದೆಂದರು. ಬಾಗೂರು ರಸ್ತೆಯಿಂದ ಬೈಪಾಸ್ ರಸ್ತೆಯನ್ನು ಸಂಪರ್ಕಿಸುವ ರಸ್ತೆಯನ್ನು ಸಹ ಅಭಿವೃದ್ಧಿಪಡಿ ಸಲಾಗುವುದು.ಸ್ಥಳೀಯ ಗ್ರಾಮಸ್ಥರು ಗೊಬ್ಬರವನ್ನು ರಸ್ತೆಯ ಬದಿಯಲ್ಲಿ ಹಾಕಿ ಎರಡರಿಂದ ಮೂರು ಅಡಿ ಗುಂಡಿ ಬಿದ್ದು ರಸ್ತೆ ಹಾಳಾಗಿ ಅಪಘಾತಗಳಾಗುವ ಸನ್ನಿವೇಶ ಹೆಚ್ಚಾಗಿರುವುದರಿಂದ ಗೊಬ್ಬರವನ್ನು ತಮ್ಮ ಜಮೀನಿನಲ್ಲಿ ಹಾಕಿಕೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗುಲಸಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್, ಉಮೇಶ್, ಗಿರೀಶ್, ಅಣ್ಣೇಗೌಡ ಗ್ರಾಮದ ಮುಖಂಡರು  ಉಪಸಿತರಿದ್ದರು.

Sneha Gowda

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

13 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

15 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

19 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

29 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

35 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

50 mins ago