Categories: ಹಾಸನ

ಚನ್ನರಾಯಪಟ್ಟಣ: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ಚನ್ನರಾಯಪಟ್ಟಣ: ತಾಲೂಕಿನ ಕಸಬಾ ಹೊಬಳಿ ದಿಂಡಗೂರು ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸಾರ್ವಜನಿಕರು ಧರಣಿ ನಡೆಸಿದರು. ಧರಣಿಯನ್ನು ಉದ್ದೇಶಿಸಿ ಜೋಗಿಪುರ ನಂದನ್ ಮಾತನಾಡಿ, ಗ್ರಾಮ ಪಂಚಾಯಿತಿ ಬಾಗಿಲು ತೆರೆಯುವ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿಲ್ಲ, ಬೆಳಗ್ಗೆ ೧೨ ಗಂಟೆಗೆ ಕಚೇರಿಗೆ ಆಗಮಿಸಿದ್ಧೇನೆ, ಸಂಜೆ ೪ ಗಂಟೆಯಾದರು ಇತ್ತು ಅಧಿಕಾರಿಗಳು ಸುಳಿದಿಲ್ಲ, ಇನ್ನು ಸಿಬ್ಬಂದಿಗಳು ಕಚೇರಿಯಲ್ಲಿ ಕುಳಿತ್ತಿಲ್ಲ ಎಂದು ಆಪಾದನೆ ಮಾಡಿದರು.

ಒಂದು ದಿವಸ ಈ ರೀತಿಯಾದರೆ ನಾವು ಪ್ರಶ್ನೆ ಮಾಡುತ್ತಿರಲಿಲ್ಲ ಆದರೆ ವಾರದಲ್ಲಿ ಮೂರು ದಿವಸ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದೆ ಮೂರು ದಿವಸವೂ ಇದೇ ರೀತಿಯಾಗಿದೆ, ಈ ಬಗ್ಗೆ ದೂರವಾಣಿ ಮೂಲಕ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್‌ಕುಮಾರ್ ಗಮನಕ್ಕೆ ತಂದರು ಅವರು ತಾಲೂಕು ಪಂಚಾಯಿತಿಗೆ ಆಗಮಿಸಿ ನಿಮ್ಮ ಕೆಲಸ ಮಾಡಿಕೊಡುತ್ತೇನೆ ಎನ್ನುತ್ತಾರೆ ಎಂದರು.

ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಹಾಜರಾಗದೆ ಬಾಗಿಲು ತೆರೆದು ಈ ರೀತಿ ಹೋರ ಹೋಗುವುದಾದರೆ ಗ್ರಾಮ ಪಂಚಾಯಿತಿಗೆ ಕಾರ್ಯಾಲಯ ಅಗತ್ಯವಿಲ್ಲ, ಇದನ್ನು ಸಂಪೂರ್ಣ ಬಾಗಿಲು ಹಾಕಿ,ತಾಲೂಕು ಪಂಚಾಯಿತಿಯಲ್ಲಿ ಎಲ್ಲಾ ಕೆಲಸ ಮಾಡಲಿ ಎಂದರು,ಮೇಲಧಿಕಾರಿಗಳ ನಿರ್ಲಕ್ಷದಿಂದ ದಿಂಡಗೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸರಿಯಾಗಿ ಕಚೇರಿಗೆ ಆಗಮಿಸುತ್ತಿಲ್ಲ ಎಂದು ದೂರಿದರು.

ತಾಲೂಕು ಪಂಚಾಯಿತಿ ಇಒಸುನಿಲ್ ತಮ್ಮ ಕೈ ಕೆಳಗೆ ಕೆಲಸ ಮಾಡುವ ಸಿಬ್ಬಂದಿಗಳಿಂದ ಸರಿಯಾಗಿ ಕೆಲಸ ಮಾಡಿಸಲು ಸಾಧ್ಯವಾಗದೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಇಲ್ಲವೆ ಬೇರೆ ಕಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಬೇಕು, ಬದಲಾಗಿ ಸಾರ್ವಜನಿಕರಿಗೆ ಉಡಾಫೆ ಉತ್ತರ ನೀಡುವುದು ಎಷ್ಟು ಸರಿ, ಸರ್ಕಾರ ವೇತನ ನೀಡುವುದು ಜನರ ಸಮಸ್ಯೆ ಬಗೆ ಹರಿಸಲೆಂದು ಆದರೆ ಇವರು ಜನರನ್ನು ಮನೆ ಕೆಲಸದವರ ರೀತಿ ಮಾತನಾಡಿಸುತ್ತಾರೆ ಎಂದು ಆಪಾದನೆ ಮಾಡಿದರು.

ಪಿಡಿಓ ರಾಮಸ್ವಾಮಿ ಕಚೇರಿಗೆ ಆಗಮಿಸಿಲ್ಲ ಆದರೂ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆ ಇದನ್ನು ಗಮನಿಸಿದರೆ, ಪಿಡಿಒ ಎರಡ್ಮೂರು ದಿವಸದ ಸಹಿಯನ್ನು ಒಂದೇ ದಿವಸ ಮಾಡಿರುವುದು ಅನುಮಾನ ಕಾಡುತ್ತಿದೆ, ಇವರು ಜನರಿಗೆ ಸಿಗುತ್ತಿಲ್ಲ ದೂರವಾಣಿ ಕರೆ ಮಾಡಿದರೆ ಪುನ್ ಆಪ್ ಮಾಡಿಕೊಂಡಿದ್ದಾರೆ, ಇಂತಹ ಅಧಿಕಾರಿ ವಿರುದ್ದ ಜಿಲ್ಲಾ ಪಂಚಾಯಿತಿ ಸಿಇಒ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಚೇರಿಯಲ್ಲಿ ನೀರುಘಟಿ, ಡಿ.ಗ್ರೂಪ್ ನೌಕರರು ಕುಳಿತುಕೊಂಡು ಕಚೇರಿಗೆ ಆಗಮಿಸುವ ಜನರ ಸಮಸ್ಯೆ ಆಲಿಸುವ ಸೌಜನ್ಯವನ್ನು ಬೆಳೆಸಿಕೊಂಡಿಲ್ಲ, ಚನ್ನರಾಯಟಪಟ್ಟಣ ನಗರಕ್ಕೆ ಕೇವಲ ಎರಡು ಕೀಮಿ ಸಮೀಪದಲ್ಲಿ ದಿಂಡಗೂರು ಗ್ರಾಮ ಪಂಚಾಯಿತಿ ಇದೆ, ಇಂತಹ ಗ್ರಾಪಂಗಳ ಗತಿ ಈ ರೀತಿಯಾದರೆ ಇನ್ನು ಗಡಿಯಲ್ಲಿ ಗ್ರಾಮ ಪಂಚಾಯಿತಿಗಳ ಸಮಸ್ಯೆ ಎಷ್ಟು ಇದೆ ಎನ್ನುವುದನ್ನು ಜಿಲ್ಲಾಧಿಕಾರಿಗಳು ಅರಿಯಬೇಕು ಎಂದು ಆಗ್ರಹಿಸಿದರು.

ಕಚೇರಿಗೆ ಆಗಮಿಸಿದ್ದ ಮತ್ತೊಬ್ಬ ಆರ್‌ಟಿಐ ಕಾರ್ಯಕರ್ತ ಚೇತನ್ ಮಾತನಾಡಿ ೧೫.ನೇ ಹಣಕಾಸಿನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಈ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಮಾಹಿತಿ ಕೇಳಿದ್ದೇನೆ ಕಳೆದ ಒಂದು ತಿಂಗಳಿನಿಂದ ಮಾಹಿತಿ ನೀಡುತ್ತಿಲ್ಲ, ತಾಲೂಕು ಪಂಚಾಯಿತಿ ಇಒ ಸುನಿಲ್ ಕುಮಾರ್ ಬೇಟಿ ಮಾಡಿದರೆ ಗ್ರಾಮ ಪಂಚಾಯಿತಿ ಅಡಳಿತ ಮಂಡಳಿ ಸುಪ್ರೀಂ ಇದಕ್ಕೂ ನನಗೂ ಸಂಬಂದ ವಿಲ್ಲ ಎನ್ನುತ್ತಾರೆ ಎಂದು ಅಪಾದನೆ ಮಾಡಿದರು.

ಜೋಗಿಪುರ ಮಂಜೇಗೌಡ ಮಾತನಾಡಿ, ಸ್ವಚ್ಚ ಭಾರತ್ ವಿಷನ್ ಮೂಲಕ ಮೂರು ಲಕ್ಷ ರೂ. ವೆಚ್ಚ ಮಾಡಿ ಕಸ ಸಂಗ್ರಹ ಮಾಡಲು ಆಟೋ ಖರೀದಿಸಲಾಗಿದೆ, ಒಂದು ದಿವಸವೂ ರಸ್ತೆಯಲ್ಲಿ ಆಟೋ ಸಂಚಾರ ಮಾಡಿಲ್ಲ ಸರ್ಕಾರದ ಹಣ ನೀರು ಪಾಲು ಮಾಡಲಾಗುತ್ತಿದೆ, ಅಧಿಕಾರಿಗಳ ನಿರ್ಲಕ್ಷಕ್ಕೆ ಜನರ ಹಣ ಮಣ್ಣು ಪಾಲು ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

10 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

24 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

36 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

52 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago