ಹಾಸನ: ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿನ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಖುದ್ದು ಆಗಮಿಸಿ ನಿವಾರಿಸಲಿ ದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.
ಸಂಸದರ ವಿಶ್ವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು ಹಿಂದಿನ ಚುನಾ ವಣೆ ಸಂದರ್ಭದಲ್ಲಿ ದೇವೇ ಗೌಡರೇ ಕೂತು ಸ್ಥಳೀಯ ಶಾಸಕರು ಹಾಗೂ ಮುಖಂಡ ರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ.ಅಂತೆಯೇ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಮಾ ಹಿತಿ ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ಹಾಸನ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವ ರು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಸೂರಜ್ ರೇವಣ್ಣ ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ಅವರು ಅವರ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸು ವುದು ಬೇಡ ರೇವಣ್ಣ ಅವರು ೧೫ ವರ್ಷಗಳಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿ ಎಸ್ ಶಾಸಕರನ್ನು ಗೆಲ್ಲಿಸಿ ಕೊಂಡು ಬರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ ಎಂದರು.
ಪ್ರತಿಭಟನೆ ವಾಪಸ್
ಭವಾನಿ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಲು ಮಹಿಳಾ ಕಾರ್ಯಕರ್ತರೊಂದಿಗೆ ಶಾಂತಿ ರೀತಿಯಲ್ಲಿ ಪ್ರತಿಭಟನೆ ಮಾಡುವುದಾಗಿ ಜವರೇಶ್ ಹಾಗೂ ಪ್ರದೀಪ್ ಅವರು ತಿಳಿಸಿದ್ದರು. ಸಂಸದರ ನಿವಾಸದ ಎದುರು ಇಂತಹ ಸಂದರ್ಭದಲ್ಲಿ ಪ್ರತಿಭಟನೆಗೆ ಕೂರುವುದು ಸರಿಯಲ್ಲ ಎಂದು ತಿಳಿಸಿದ್ದೆ ಆದರೂ ಮಹಿಳೆಯರು ಅಭಿಮಾನದಿಂದ ಭವಾನಿ ರೇವಣ್ಣ ಅವರೇ ಅಭ್ಯರ್ಥಿ ಆಗಬೇಕು ಅವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದು ಈ ಬಗ್ಗೆ ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದೇನೆ ಆದ್ದರಿಂದ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದರು.