Categories: ಹಾಸನ

ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ದೇವೇಗೌಡರಿಂದ ತೆರೆ: ಪ್ರಜ್ವಲ್ ರೇವಣ್ಣ

ಹಾಸನ: ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿನ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಖುದ್ದು ಆಗಮಿಸಿ ನಿವಾರಿಸಲಿ ದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.

ಸಂಸದರ ವಿಶ್ವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು ಹಿಂದಿನ ಚುನಾ ವಣೆ ಸಂದರ್ಭದಲ್ಲಿ ದೇವೇ ಗೌಡರೇ ಕೂತು ಸ್ಥಳೀಯ ಶಾಸಕರು ಹಾಗೂ ಮುಖಂಡ ರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ.ಅಂತೆಯೇ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಮಾ ಹಿತಿ ಪ್ರಕಟಿಸಲಿದ್ದಾರೆ ಎಂದು ಹೇಳಿದರು.

ಹಾಸನ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವ ರು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಸೂರಜ್ ರೇವಣ್ಣ ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ಅವರು ಅವರ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸು ವುದು ಬೇಡ ರೇವಣ್ಣ ಅವರು ೧೫ ವರ್ಷಗಳಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿ ಎಸ್ ಶಾಸಕರನ್ನು ಗೆಲ್ಲಿಸಿ ಕೊಂಡು ಬರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ ಎಂದರು.

ಪ್ರತಿಭಟನೆ ವಾಪಸ್
ಭವಾನಿ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಲು ಮಹಿಳಾ ಕಾರ್ಯಕರ್ತರೊಂದಿಗೆ ಶಾಂತಿ ರೀತಿಯಲ್ಲಿ ಪ್ರತಿಭಟನೆ ಮಾಡುವುದಾಗಿ ಜವರೇಶ್ ಹಾಗೂ ಪ್ರದೀಪ್ ಅವರು ತಿಳಿಸಿದ್ದರು. ಸಂಸದರ ನಿವಾಸದ ಎದುರು ಇಂತಹ ಸಂದರ್ಭದಲ್ಲಿ ಪ್ರತಿಭಟನೆಗೆ ಕೂರುವುದು ಸರಿಯಲ್ಲ ಎಂದು ತಿಳಿಸಿದ್ದೆ ಆದರೂ ಮಹಿಳೆಯರು ಅಭಿಮಾನದಿಂದ ಭವಾನಿ ರೇವಣ್ಣ ಅವರೇ ಅಭ್ಯರ್ಥಿ ಆಗಬೇಕು ಅವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದು ಈ ಬಗ್ಗೆ ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದೇನೆ ಆದ್ದರಿಂದ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದರು.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago