Categories: ಹಾಸನ

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಹಾಸನ: ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಕಳೆದ ಮಾರ್ಚ್ ನಲ್ಲಿಯೇ ಜಿಲ್ಲಾ ಮಟ್ಟದ ಅಧಿವೇಶನ ನಡೆಸಿ ಜಿಲ್ಲೆಯಲ್ಲಿರುವ ದೇಗುಲಗಳಿಗೆ ತೆರಳುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೆ ತರುವಂತೆ  ತೀರ್ಮಾನಿಸಲಾಗಿತ್ತು. ಆದರೆ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ.

ಇದೀಗ ಮತ್ತೆ ಕಟ್ಟು ನಿಟ್ಟಾಗಿ ದೇಗುಲಗಳಲ್ಲಿ ವಸ್ತ್ರ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಭಿಯಾನ ನಡೆಸಲು ಕರ್ನಾಟಕ ದೇವಸ್ಥಾನ -ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ  ಮೇ.8ರಂದು ಹಾಸನದ ಎಲ್ಲಾ ಪ್ರಮುಖ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲು ಅಭಿಯಾನ ನಡೆಸಲಾಗುತ್ತಿದೆ.

ಈ ಅಭಿಯಾನದಲ್ಲಿ ಹಾಸನದ 22 ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆಯ ಫ್ಲೆಕ್ಸ್ ಅಳವಡಿಸಲಾಗುವುದು. ಮತ್ತು ಇದರ  ಉದ್ಘಾಟನೆ ಹಾಸನದ ಕಾಳಿಕಾಂಬ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ ತಿಳಿಸಿದ್ದಾರೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago