Categories: ಹಾಸನ

ಹಾಸನದಲ್ಲಿ ಮರ ಕಡಿದ ಪ್ರಕರಣ: ಐವರು ಅಧಿಕಾರಿಗಳ ಅಮಾನತು

ಹಾಸನ: ಇಲ್ಲಿನ ನಂದಗೊಂಡನಹಳ್ಳಿಯಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣದಲ್ಲಿ ಮತ್ತೋರ್ವ ಅಧಿಕಾರಿ ತಲೆದಂಡವಾಗಿದೆ. ಪ್ರಕರಣದಲ್ಲಿ ಇಲ್ಲಿಯವರೆಗೂ ಒಟ್ಟು ಐವರು ಅಧಿಕಾರಿಗಳು ಅಮಾನತು ಮಾಡಲಾಗಿದೆ.

ಪ್ರಕರಣದಲ್ಲಿ ನಿರ್ಲಕ್ಷ್ಯತೆ ವಹಿಸಿದ ಆರೋಪದ ಮೇಲೆ ಹಾಸನ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಮೋಹನ್ ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಸನ್ನ ಕುಮಾರ್.ವಿ ಆದೇಶ ಹೊರಡಿಸಿದ್ದಾರೆ.

ಗುರುವಾರ ಎಸಿಎಫ್, ಆರ್ ಎಫ್‍ಓ, ಡಿಆರ್‍ಎಫ್‍ಓ ಹಾಗೂ ಓರ್ವ ಸಿಬ್ಬಂದಿ ಸೇರಿ ನಾಲ್ವರ ಅಮಾನತುಗೊಳಿಸಲಾಗಿತ್ತು. ಡಿ.16 ರಂದು ಬೇಲೂರು ತಹಶೀಲ್ದಾರ್ ಮಮತಾರ ಸಮಯ ಪ್ರಜ್ಞೆಯಿಂದ ಪ್ರಕರಣ ಬಯಲಾಗಿತ್ತು. ಈ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣ ಮಹತ್ವ ಪಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕ್ರಮ ಕೈಗೊಂಡಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago