News Karnataka Kannada
Monday, April 29 2024
ಹಾಸನ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಡಿವಿಎಸ್‌

ಪಕ್ಷ ಸಂಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ.
Photo Credit : News Kannada

ಹಾಸನ: ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಈ ನಡುವೆ ಚುನಾವಣಾ ರಾಜಕೀಯಕ್ಕೆ ಸದಾನಂದ ಗೌಡ ಅವರು ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ’ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು