ಹಾಸನ: ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕರಾದ ಕೆ ಎಂ ಶಿವಲಿಂಗೇಗೌಡ ಹಾಗೂ ಅವರ ಪುತ್ರ ಆದರ್ಶ್ ಇಂದು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಪ್ರಯಾಣ ಬೆಳೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಿವಲಿಂಗೇಗೌಡರು, ನಾಡಿಗೆ ಒಳಿತಾಗಲಿ ಸಕಾಲದಲ್ಲಿ ಸರಿಯಾದ ಮಳೆಯಾಗಿ ದೇಶದ ರೈತರಿಗೆ ಅನುಕೂಲವಾಗಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಹೊರಟಿರುವುದಾಗಿ ತಿಳಿಸಿದರು.