News Karnataka Kannada
Tuesday, April 23 2024
Cricket
ಹಾಸನ

ಶಿರಾಡಿ ಘಾಟ್‌ನಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್‌: ಸಂಚಾರ ಸ್ಥಗಿತ

Ghat
Photo Credit : News Kannada

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿಘಾಟ್ ಬಳಿ ಬುಧವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಎಲ್‌ಪಿಜಿ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್ ಮಾಡಲಾಗಿದೆ.

ಟ್ಯಾಂಕ‌ರ್‌ನಿಂದ ಆಗುತ್ತಿರುವ ಅನಿಲ ಸೋರಿಕೆಯಿಂದ ಅಗ್ನಿ ಅನಾಹುತ ಸಂಭವಿಸುವುದನ್ನು ತಪ‍್ಪಿಸಲು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಟರ್ನ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಉರುಳಿ ಬಿದ್ದಿದೆ. ಪೊಲೀಸರು ಸಂಚಾರ ಬಂದ್ ಮಾಡಿದ್ದು, ಚಾಲಕರು ಮಾರ್ಗಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡಿದ್ದಾರೆ.

ಬೆಂಗಳೂರು-ಹಾಸನ-ಮಂಗಳೂರು, ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು‌ ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ರಾತ್ರಿ 12 ರವರೆಗೆ ಸಂಚಾರ ಸ್ಥಗಿತ: ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಬುಧವಾರ ಮಧ್ಯರಾತ್ರಿ 12 ಗಂಟೆಯವರೆಗೆ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು