News Karnataka Kannada
Saturday, May 04 2024
ಹಾಸನ

ಇಂದಿನಿಂದ ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ಜಾತ್ರಾ ಮಹೋತ್ಸವ

Hasanambe೧
Photo Credit : News Kannada

ಹಾಸನ: ಇಂದಿನಿಂದ ಅಂದ್ರೆ ನವೆಂಬರ್ 2 ರಿಂದ 15ರವರೆಗೆ ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆಯಾದ ಹಾಸನಾಂಬೆ ದರ್ಶನಕ್ಕೆ ಅವಕಾಶ ಸಿಗಲಿದೆ. ಜಿಲ್ಲಾಡಳಿತ ಮತ್ತು ಅರ್ಚಕರ ಸಮ್ಮುಖದಲ್ಲಿ ಮಧ್ಯಾಹ್ನ 12.30 ಗರ್ಭಗುಡಿಯ ಬಾಗಿಲನ್ನು ತೆಗೆಯಲಾಗುತ್ತದೆ.

ನಂತರ ಒಂದು ವರ್ಷದಿಂದ ಸಪ್ರೋಕ್ಷಣೆ ನಡೆಯುತ್ತದೆ. ಮೊದಲನೇಯ ಮತ್ತು ಕಡೆಯ ಅಂದ್ರೆ ನವೆಂಬರ್ 2 ರಂದು ನಂತರ 15ಕ್ಕೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿಲ್ಲ ಒಟ್ಟು 12 ದಿನಗಳ ಕಾಲ ಈ ಬಾರಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಡುತ್ತಿದೆ. ಹೀಗಾಗಿ ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಉದ್ದದ ಸಾಲುಗಳನ್ನ ನಿರ್ಮಿಸಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಮಾಡಿಕೊಂಡಿದೆ. ಅಲ್ಲದೇ ಬರುವ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಪ್ರತ್ಯೇಕ ಮಳಿಗೆಗಳನ್ನ ಮಾಡಿದೆ.

ಭಕ್ತಿಯಿಂದ ಬೇಡಿದ ವರವನ್ನ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದರ್ಶನ ಪಡೆಯಲು ಬೇರೆ ಜಿಲ್ಲೆಗಳಿಂದ ಮಾತ್ರವಲ್ಲ ಬೇರೆ ರಾಜ್ಯಗಳಿಂದಲೂ ಆಗಮಿಸುತ್ತಾರೆ. ಪ್ರತಿ ವರ್ಷ ಅಶ್ವೀಜ ಮಾಸದ ಮೊದಲನೇ ಗುರುವಾರ ತಾಯಿಯ ಬಾಗಿಲು ತೆರೆಯಲಾಗುತ್ತದೆ. ದೀಪಾವಳಿಯ ಮರುದಿನ ಬಾಗಿಲನ್ನು ಮುಚ್ಚಲಾಗುತ್ತದೆ.. ವರ್ಷಕ್ಕೊಮ್ಮೆ ಮಾತ್ರ ದರುಶನ ಭಾಗ್ಯ ನೀಡುವ ತಾಯಿಯ ಮಹಿಮೆಯೂ ಅಪಾರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು