News Karnataka Kannada
Saturday, May 04 2024
ಹಾಸನ

ಇಂದಿನಿಂದ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನೋತ್ಸವ

Jatra Hasssn
Photo Credit : News Kannada

ಹಾಸನ: ಇಂದಿನಿಂದ 12 ದಿನ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನೋತ್ಸವ ಶುರುವಾಗಲಿದ್ದು, ಹಾಸನಾಂಬೆ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. 24 ಗಂಟೆಯೂ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದ್ದು, ಈ ಬಾರಿ 10 ಲಕ್ಷ ಭಕ್ತರು ಹಾಸನಾಂಬೆ ದರ್ಶನ ಪಡೆಯುವ ನಿರೀಕ್ಷೆ ಇದೆ. ಹೀಗಾಗಿ ದೇವಿ ದರ್ಶನ ಪಡೆಯಲು ಹಾಸನ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಿದೆ.

ಈಗಾಗಲೇ ದೇಗುಲದ ಬಾಗಿಲು ಓಪನ್ ಆಗಿದ್ದು, ಹಾಸನಾಂಬೆ ಸನ್ನಿಧಿ ಬಗೆಬಗೆಯ ಪುಷ್ಪಾಲಂಕಾರದೊಂದಿಗೆ ಕಂಗೊಳಿಸುತ್ತಿದೆ. ವಿದ್ಯುತ್ ದೀಪಾಲಂಕಾರಗಳು ಮೆರುಗು ಹೆಚ್ಚಿಸಿವೆ. 1 ವರ್ಷದ ಬಳಿಕ ಹಾಸನಾಂಬೆಯ ದರ್ಶನ ಮಾಡುತ್ತೇವೆ ಎನ್ನುವ ಖುಷಿ ಮನೆ ಮಾಡಿದೆ. ಒಟ್ಟು 14 ದಿನ ಹಾಸನಾಂಬೆಯ ಉತ್ಸವ ನಡೆಯಲಿದೆ.
ಈ ಬಾರಿ ಶಕ್ತಿ ಯೋಜನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಸುಮಾರು 10 ಕಿಲೋ ಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು