Categories: ಹಾಸನ

ಹಾಸನ: ಐಐಟಿ ಸ್ಥಾಪನೆಗೆ ೨೬೦ ಎಕರೆ ಸಾಕು- ಪ್ರೀತಂ.ಜೆ.ಗೌಡ

ಹಾಸನ: ಐಐಟಿ ಸ್ಥಾಪನೆಗೆ ಮೀಸಲಿರಿಸಿರುವ ಜಾಗವನ್ನು ಕೈಗಾರಿಕಾ ಅಭಿವೃದ್ಧಿ ಹಾಗೂ ವಸತಿ ಉದ್ದೇಶಗಳಿಗೆ ಬಳಸಲಾಗುವುದು ಎಂದು ಶಾಸಕ ಪ್ರೀತಂ ಜೆ ಗೌಡ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐಐಟಿ ಸ್ಥಾಪನೆ ಮಾಡಲು ಕೇವಲ ೨೬೦ ಎಕರೆ ಜಾಗ ಸಾಕಾಗಲಿದ್ದು ೧೦೨೪ ಎಕರೆ ವಶಪಡಿಸಿಕೊಂಡಿ ರುವುದು ಸರಿಯಲ್ಲ..!! ಮಾಜಿ ಪ್ರಧಾನಿ ದೇವೇಗೌಡರ ಕನಸನ್ನು ನನಸು ಮಾಡುವ ಉದ್ದೇಶ ನನಗೂ ಇದೆ ಆದರೆ ಕೋಟ್ಯಾಂತರರೂ ಬೆಲೆಬಾಳುವ ಜಮೀನನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದರು.

ಐಐಟಿ ಸ್ಥಾಪನೆ ಮಾಡಿದರೆ ಜಿಲ್ಲೆಗೆ ಹೆಮ್ಮೆ ಆದರೆ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುವುದಿಲ್ಲ ಐಐಟಿ ಬದಲು ಕೈಗಾರಿಕೆಗಳನ್ನು ಸ್ಥಾಪನೆ ಮಾಡಿದರೆ ಜಿಲ್ಲೆಯ ಪದವೀಧರರು, ಡಿಪ್ಲೋಮೋ, ಐಟಿಐ ಮುಗಿಸಿರುವ ಜಿಲ್ಲೆಯ ಸುಮಾರು ೧೦,೦೦೦ ಯುವಕರಿಗೆ ಉದ್ಯೋಗ ಒದಗಿಸಬಹುದಾಗಿದೆ ಎಂದು ಸಮರ್ಥಿಸಿಕೊಂಡರು.

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಐಐಟಿ ಸ್ಥಾಪನೆ ಮಾಡುವುದಾದರೆ ಹೊಳೆನರಸೀಪುರದಲ್ಲಿ ಮಾಡಲಿ, ಈ ಹಿಂದೆ ವೆಟರ್ನರಿ ಕಾಲೇಜನ್ನು ಸ್ಥಾಪನೆ ಮಾಡಲು ನನ್ನ ಕ್ಷೇತ್ರದ ನೂರಾರು ಎಕರೆಯನ್ನು ವಶಪಡಿಸಿಕೊಂಡರು ಕೋಟ್ಯಾಂತರರು ಬೆಲೆಬಾಳುವ ಭೂಮಿಯನ್ನು ಕಡಿಮೆ ಬೆಲೆಯಲ್ಲಿ ಖರೀದಿಸಿ ಈಗ ಯಾವ ಸ್ಥಿತಿಯಲ್ಲಿದೆ ಎಂದು ನೀವು ಗಮನಿಸಬ ಹುದಾಗಿದೆ.

ಇದೀಗ ಐಐಟಿ ಗಾಗಿ ಗುರುತಿಸಲಾಗಿರುವ ಭೂಮಿಯಲ್ಲಿ ಕೈಗಾರಿಕಾ ಅಭಿವೃದ್ಧಿ ಸೇರಿದಂತೆ ವಸತಿ ಉದ್ದೇಶಗಳಿಗೆ ಬಳಸಲಾಗುತ್ತಿದ್ದು ಕೃಷ್ಣ ಲೇಔಟ್ ರೀತಿಯಲ್ಲಿಯೇ ನಿವೇಶನ ನಿರ್ಮಾಣ ಹಾಗೂ ರೈತರಿಗೆ ಅಗತ್ಯ ಪರಿಹಾರ, ನಿವೇಶನಗಳನ್ನು ಒದಗಿಸಲಾಗುವುದು ಎಂದು ಪ್ರೀತಂ ಗೌಡ ಭರವಸೆ ನೀಡಿದರು.

Gayathri SG

Recent Posts

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

11 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

24 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

3 hours ago