Categories: ಹಾಸನ

ಹಾಸನ: ನಾನೇ ಜೆಡಿಎಸ್ ಅಭ್ಯರ್ಥಿ ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ

ಹಾಸನ: ತೀವ್ರ ಕುತೂಹಲ ಕೆರಳಿಸಿರುವ ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಮುಂದುವರಿದಿರುವಾಗಲೇ, ನಾನೇ ಅಭ್ಯರ್ಥಿ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಹೇಳಿಕೊಂಡಿದ್ದಾರೆ.

ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ ಎಂದಿದ್ದಾರೆ.

ತಾವೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.?ಡಿ ರೇವಣ್ಣ ಅವರ ಪತ್ನಿ, ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಅಲ್ಲದೇ ಶೀಘ್ರದಲ್ಲೇ ಪಟ್ಟಿಯಲ್ಲಿ ಹೆಸರು ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಹಾಸನದಿಂದ ರೇವಣ್ಣ ಸ್ಪರ್ಧೆ ಮಾಡುತ್ತಾರಾ? ಭವಾನಿ ರೇವಣ್ಣ ಅವರು ಅಭ್ಯರ್ಥಿ ಆಗುತ್ತಾರಾ ಎಂಬ ಚರ್ಚೆ ಹಲವು ದಿನಗಳಿಂದ ಜೋರಾಗಿದೆ. ಇದರೊಂದಿಗೆ ಶಾಸಕ ಪ್ರೀತಂ ಗೌಡ ಅವರ ಸವಾಲನ್ನು ಜೆಡಿಎಸ್ ಸ್ವೀಕಾರ ಮಾಡುತ್ತಾ ಎಂಬ ಕುತೂಹಲವೂ ಹಲವರನ್ನು ಕಾಡುತ್ತಿತ್ತು.

ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಕ್ಷೇತ್ರವಾಗಿ ಕೆಲವು ಕೆಲಸ, ಕಾರ್ಯಗಳು ಉಳಿದುಕೊಂಡಿವೆ. ಚುನಾವಣೆ ಇನ್ನೇನು ಹತ್ತಿರ ಬಂದಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ಎಲ್ಲರೂ ಕೂಡ ಮಾತನಾಡಿಕೊಂಡು ನಿರ್ಣಯ ತಗೊಂಡಿದ್ದಾರೆ. ಹಾಗಾಗಿ ಇನ್ನು ಸ್ವಲ್ಪ ದಿವಸದಲ್ಲೇ ನಮ್ಮ ಹೆಸರು ಕೂಡ ಹೇಳುತ್ತಾರೆ. ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಅಲ್ಲದೇ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಕೂಡ ನಿರಂತರವಾಗಿ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಈಗಾಗಲೇ ಜೆಡಿಎಸ್ ೨೦೨೩ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ.

ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago