News Karnataka Kannada
Sunday, May 05 2024
ಹಾಸನ

ಹಾಸನ: ವಿನಯ್ ಗಾಂಧಿಗೆ ಎಂಪಿ ಟಿಕೆಟ್ ನೀಡುವಂತೆ ಒತ್ತಾಯ

Demand for MP ticket for Vinay Gandhi
Photo Credit : News Kannada

ಹಾಸನ: ಹಲವು ದಶಕಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ದುಡಿದಿರುವ ವಕೀಲರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ವಿನಯ್ ಗಾಂಧಿ ಅವರಿಗೆ ಈ ಬಾರಿಯ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡುವಂತೆ ಗ್ರಾಮ ಪಂಚಾಯತಿ ಸದಸ್ಯ ನಾಗರಾಜು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 45 ವರ್ಷಗಳಿಂದ ವಿನಯ್ ಗಾಂಧಿಯವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾಗಿ, ಕೆಪಿಸಿಸಿ ಸದಸ್ಯರಾಗಿ, ಎನ್ ಎಸ್ ಯು ಐ ಅಧ್ಯಕ್ಷರಾಗಿ ಹಲವು ವರ್ಷಗಳಿಂದ ಕೆಲಸ ಮಾಡಿದ್ದು, ಪಕ್ಷದ ಪರವಾಗಿ ವಿರೋಧ ಪಕ್ಷಗಳನ್ನು ಎದುರಿಸುತ್ತಾ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

ಅಲ್ಲದೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆರು ಬಾರಿ ಟಿಕೆಟ್ ಗೆ ಪ್ರಯತ್ನ ಮಾಡಿದರು ಅವಕಾಶ ದೊರೆತಿಲ್ಲ ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ವಿನಯ್ ಗಾಂಧಿಯವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎನ್ ಜೆ ಶಂಕರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರಶೇಖರ್, ಎಂ .ಹರ್ಷ, ಆರ್. ನಾಗರಾಜು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು