Categories: ಹಾಸನ

ಹಾಸನ: ಹೊಳೆನರಸೀಪುರದಲ್ಲಿ ಚುನಾವಣೆ ನಿಲ್ಲಿಸಲು ದೇವರಾಜೇಗೌಡ ಒತ್ತಾಯ

ಹಾಸನ: ಹೊಳೆನರಸೀಪುರದಲ್ಲಿ ಚುನಾವಣಾ ಅಕ್ರಮ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು ನಾಳೆ ನಡೆಯುವ ಹೊಳೆನರಸೀಪುರ ವಿಧಾನಸಭೆ ಕ್ಷೇತ್ರದ ಮತದಾನ ನಿಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ದಂಡಿಗನಹಳ್ಳಿ ಹೋಬಳಿಯ ಅಣ್ಣೇನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತದಾರರಿಗೆ ಕೋಳಿ ಹಾಗೂ ಹಣವನ್ನು ಹಂಚುತ್ತಿದ್ದ ಬಗ್ಗೆ ಮಾಹಿತಿ ದೊರೆತ ನಂತರ ಸ್ಥಳಕ್ಕೆ ತೆರಳಿದಾಗ ನನ್ನ ಮೇಲೆ ಹಾಗೂ ಅಂಗರಕ್ಷಕರು , ವಾಹನದ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಿನ ಗಾಜುಗಳನ್ನು ಒಡೆದು ಹಾಕಲಾಗಿದೆ .ಈಗಾಗಲೇ ದೂರು ದಾಖಲಿಸಿದ್ದು ಕ್ರಮಕ್ಕೆ ಒತ್ತಾಯಿಸಿದ್ದೇನೆ ಎಂದರು,
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ರೇವಣ್ಣ ಅವರ ಅಧೀನದಲ್ಲಿದ್ದು ಚುನಾವಣಾ ಪ್ರಕ್ರಿಯೆ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೆ ಕ್ಷೇತ್ರದಲ್ಲಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ   ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ಈಗಾಗಲೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಮುಂದೂಡಬೇಕು ಬೂತ್ ಗಳಿಗೆ ತಲುಪಿಸಿರುವ ಹಣ ಹಾಗೂ ಕೋಳಿ ದಾಸ್ತಾನು ಜಪ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಅಗತ್ಯ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮತಗಟ್ಟೆ ಒಳಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 hours ago