Categories: ಹಾಸನ

ಹಾಸನ: ಜಿಲ್ಲಾ ಪೊಲೀಸ್ ಇಲಾಖೆ ದುರಾಡಳಿತ- ರೇವಣ್ಣ ಆಕ್ರೋಶ

ಹಾಸನ: ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದ್ದು ಬೇಕಾಬಿಟ್ಟಿ ಆಡಳಿತ ನಡೆಸುತ್ತಿರುವ ವಿರುದ್ಧ ಧರಣಿ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ .ಡಿ ರೇವಣ್ಣ ತಿಳಿಸಿದರು.

ನಗರದ ಸಂಸದರ ನಿವಾಸ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ನಗರ ಪೊಲೀಸ್ ಠಾಣೆಯ ಡಿವೈಎಸ್ಪಿ ಹಿಡಿತದಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆ ನಡೆಯುತ್ತಿದ್ದು ರೌಡಿಶೀಟರ್ ಗಳು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡು ತ್ತಿರುವುದು ಗಮನಕ್ಕೆ ಬಂದಿದೆ. ಜೆಡಿಎಸ್ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿಗೆ ದೊಡ್ಡಪುರ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಗರಸಭೆಯ ಟ್ರ್ಯಾಕ್ಟರ್ ನಲ್ಲಿ ನಮ್ಮ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಫ್ಲೆಕ್ಸ್ ಗಳನ್ನು ತೆರವು ಮಾಡಿದ್ದಾರೆ ದೊಡ್ಡಪುರಕ್ಕೂ ನಗರ ಸಭೆ ಆಡಳಿತಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಭೇಟಿ ನೀಡಿದ ಸಂದರ್ಭದಲ್ಲಿ ಗಲಾಟೆ ನಡೆದಿದ್ದು ಕೇವಲ ಜೆಡಿಎಸ್ ಕಾರ್ಯಕರ್ತರ ವಿರು ದ್ಧವೇ ಪೊಲೀಸರು ಕ್ರಮ ಕೈಗೊಂಡಿದ್ದು ಇಲಾಖೆಯ ಅವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದು ದೂರಿದರು.

ಪೋಲಿಸ್ ಇಲಾಖೆಯಿಂದ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ದಾಖಲಿಸುತ್ತಿರುವ ವಿರುದ್ಧ ಚುನಾವಣಾ ಆಯೋಗಕ್ಕೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡುತ್ತಿದ್ದೇನೆ. ರಾಜ್ಯ ಗೃಹ ಇಲಾಖೆಗೂ ಜೆಡಿಎಸ್ ರಾಜ್ಯ ಧ್ಯಕ್ಷರಿಂದ ಪತ್ರ ಬರೆಯಲಾಗಿದ್ದು ಮಾರ್ಚ್ ೨೭ರ ಒಳಗೆ ಲೋಪವೆಸಗಿರುವ ಪೊಲೀಸ್ ಅಧಿಕಾರಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳದಿದ್ದರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಜೆಡಿಎಸ್ ಪಕ್ಷದ ವತಿಯಿಂದ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ಪೊಲೀಸ್ ಠಾಣೆಗಳು ಸೆಟಲ್ಮೆಂಟ್ ಕೇಂದ್ರ ಗಳಾಗಿ ಪರಿವರ್ತನೆಗೊಂಡಿದ್ದು ಡಿ ವೈ ಎಸ್‌ಪಿ ಇದಕ್ಕೆ ಮುಖ್ಯಸ್ಥರನ್ನಾಗಿ ಮಾಡಿದರೆ ಉತ್ತಮ ಎಂದು ಟೀಕಿಸಿದರು.

ನನ್ನ ೨೫ ವರ್ಷ ರಾಜಕೀಯ ಜೀವನದಲ್ಲಿ ೧೨೧ ಗ್ರಾಮಗಳಲ್ಲಿ ೧೦೭ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಹಲವರ ವಿರುದ್ಧ ಗಡಿಪಾರು ಆದೇಶ ಮಾಡಿರುವುದು ಇದೇ ಮೊದಲು ಎಂದು ಕಿಡಿಕಾರಿದರು.

ಜಿಲ್ಲೆಯ ಪೊಲೀಸ್ ಇಲಾಖೆಯನ್ನು ಹಿಡಿತದಲ್ಲಿ ಇಟ್ಟುಕೊಂಡು ಬೇಕಾಬಿಟ್ಟಿ ಆಡಳಿತ ನಡೆಸುತ್ತಿರುವ ಡಿ ವೈ ಎಸ್ ಪಿ ಅವರನ್ನು ವರ್ಗಾವಣೆ ಮಾಡಬೇಕು ಹಾಗೂ ಅವರ ವಿರುದ್ಧ ಡಿಪಾರ್ಟ್ಮೆಂಟ್ ಲ್ ಎನ್ಕ್ವೈರಿ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಸತೀಶ್ ಇದ್ದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago