Categories: ಹಾಸನ

ಹಾಸನ: ಐದು ವರ್ಷದಲ್ಲಿ ಹಾಸನ ವಿಮಾನ ನಿಲ್ದಾಣ ಅಭಿವೃದ್ಧಿ

ಹಾಸನ: ಪ್ರಾದೇಶಿಕ ಸಂಪರ್ಕ ಯೋಜನೆ (ಆರ್‌ಸಿಎಸ್)-ಉಡೇ ದೇಶ್ ಕಾ ಆಮ್ ನಾಗರಿಕ್ (ಉಡಾನ್)  ಯೋಜನೆಯಲ್ಲಿ 2024 ರ ವೇಳೆಗೆ 100 ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ ಕೆ ಸಿಂಗ್ ಸೋಮವಾರ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ವಿಮಾನ ನಿಲ್ದಾಣಗಳ ಉನ್ನತೀಕರಣ ಮತ್ತು ಆಧುನೀಕರಣವು ನಿರಂತರ ಪ್ರಕ್ರಿಯೆ. ಭೂಮಿಯ ಲಭ್ಯತೆ, ವಾಣಿಜ್ಯ ಕಾರ್ಯಸಾಧ್ಯತೆ, ಸಾಮಾಜಿಕ-ಆರ್ಥಿಕ ಪರಿಗಣನೆ, ಟ್ರಾಫಿಕ್ ಬೇಡಿಕೆ ಆಧಾರದ ಮೇಲೆ ಕಾಲಕಾಲಕ್ಕೆ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇತರ ವಿಮಾನ ನಿಲ್ದಾಣ ನಿರ್ವಾಹಕರು ಇದನ್ನು ಕೈಗೊಳ್ಳುತ್ತಾರೆ ಎಂದು ಸಚಿವರು ಹೇಳಿದರು.

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇತರ ಏರ್‌ಪೋರ್ಟ್ ನಿರ್ವಾಹಕರು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳು ಮತ್ತು ಹೊಸ ಟರ್ಮಿನಲ್‌ಗಳ ನಿರ್ಮಾಣ, ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಳ ವಿಸ್ತರಣೆ ಮತ್ತು ಆಧುನೀಕರಣ ಮತ್ತು ಇತರ ಚಟುವಟಿಕೆಗಳ ನಡುವೆ ರನ್‌ವೇಗಳನ್ನು ಬಲಪಡಿಸಲು 2025 ರ ವೇಳೆಗೆ ಭಾರತದಾದ್ಯಂತ ವಿಮಾನ ನಿಲ್ದಾಣ ವಲಯದಲ್ಲಿ ಅಂದಾಜು 98,0000 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಯ ಗುರಿ ನಿಗದಿಮಾಡಿದ್ದಾರೆ. ಇದರಲ್ಲಿ, 25,000 ಕೋಟಿ ರೂಪಾಯಿಗಿಂತ ಹೆಚ್ಚಿನ ಬಂಡವಾಳ ವೆಚ್ಚವನ್ನು ಎಎಐ ಮತ್ತು ಉಳಿದ ಖಾಸಗಿ ವಿಮಾನ ನಿಲ್ದಾಣ ನಿರ್ವಾಹಕರು, ಡೆವಲಪರ್‌ಗಳು ಹೂಡಿಕೆ ಮಾಡಲಿದ್ದಾರೆ ಎಂದು ಸಿಂಗ್ ವಿವರಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಹೊಸ ವಿಮಾನ ನಿಲ್ದಾಣಗಳ ಅಭಿವೃದ್ಧಿಯು  ಮಹಾರಾಷ್ಟ್ರದ ನವಿ ಮುಂಬೈ, ಕರ್ನಾಟಕದ ವಿಜಯಪುರ, ಹಾಸನ ಮತ್ತು ಶಿವಮೊಗ್ಗ, ಉತ್ತರ ಪ್ರದೇಶದ ನೋಯ್ಡಾ (ಜೆವಾರ್), ಗುಜರಾತ್‌ನ ಧೋಲೇರಾ ಮತ್ತು ಹಿರಾಸರ್ ಮತ್ತು ಆಂಧ್ರಪ್ರದೇಶದ ಭೋಗಾಪುರಂನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳ ನಿರ್ಮಾಣವನ್ನು ಒಳಗೊಂಡಿದೆ.

ಅಸ್ತಿತ್ವದಲ್ಲಿರುವ ಬ್ರೌನ್‌ಫೀಲ್ಡ್ ವಿಮಾನ ನಿಲ್ದಾಣಗಳ ಆಧುನೀಕರಣ ಮತ್ತು ಉನ್ನತೀಕರಣ ಕಾರ್ಯವು ದೆಹಲಿ, ಬೆಂಗಳೂರು, ಹೈದರಾಬಾದ್, ಲಕ್ನೋ, ಗುವಾಹಟಿ, ಅಹಮದಾಬಾದ್ ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ  ಕಾರ್ಯಗಳನ್ನು ಒಳಗೊಂಡಿದೆ.

ಸರ್ಕಾರವು 2024 ರ ವೇಳೆಗೆ ಪ್ರಾದೇಶಿಕ ಸಂಪರ್ಕ ಯೋಜನೆ (ಆರ್‌ಸಿಎಸ್)- ಉಡೇ ದೇಶ್ ಕಾ ಆಮ್ ನಾಗರಿಕ್ (ಉಡಾನ್) ಮೂಲಸೌಕರ್ಯ ಯೋಜನೆಯಲ್ಲಿ100 ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಯೋಜಿಸಿದೆ ಎಂದು ಸಿಂಗ್ ಹೇಳಿದರು.

Ashika S

Recent Posts

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

8 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

10 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

34 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

35 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

58 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

1 hour ago