Categories: ಹಾಸನ

ಹಾಸನ: ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್, ಅ.೨೭ರಂದು ಆಯ್ಕೆ ಪ್ರಕ್ರಿಯೆ ಪ್ರಾರಂಭ

ಹಾಸನ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನ.೨ರಿಂದ ೬ ರವರೆಗೆ ನಡೆಯುವ ೧೯ ವರ್ಷದೊಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದಿಂದ ಮಹಿಳಾ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಶಾಖೆಯಾದ ಕ್ರೀಡಾ ಕಲ್ಯಾಣದ ಮೂಲಕ ಅ.೨೭ರಂದು ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ಬೆಳಗ್ಗೆ ೯ ಗಂಟೆಗೆ ಇಲಾಖಾ ವತಿಯಿಂದ ನಡೆಸಲಾಗುತ್ತಿದ್ದು, ಈ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಜಿಲ್ಲೆಯ ಮಹಿಳಾ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಸ್ಥಳೀಯ ವಾಲಿಬಾಲ್ ಕೀಡಾಪಟುಗಳು ಭಾಗವಹಿಸಬಹುದಾಗಿದೆ.

ಸದರಿ ಕ್ರೀಡಾಪಟುಗಳು ೨೦೦೪ರ ಜನವರಿ ೧ ಅಥವಾ ನಂತರ ಜನಿಸಿರಬೇಕು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಚಾರ ಹಾಗೂ ಪ್ರಯಾಣ ಭತ್ಯೆ/ದಿನಭ್ಯತೆಯನ್ನು ಇಲಾಖೆಯಿಂದ ಭರಿಸಲಾಗುವುದಿಲ್ಲ. ಸದರಿ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ತರಬೇತಿ ಶಿಬಿರ ಹಾಗೂ ಪಂದ್ಯಾವಳಿಗೆ ತೆರಳಲು ಪೂರ್ವ ಸಿದ್ದತೆಯೊಂದಿಗೆ , ಆಧಾರ್ ಕಾರ್ಡ್ ಮತ್ತು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯೊಂದಿಗೆ ಬರತಕ್ಕದ್ದು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago